ಹಿಮಾಚಲ ಪ್ರದೇಶ ಚುನಾವಣೆಗೆ 67 ಸಿಎಪಿಎಫ್‌ ತುಕಡಿ ಕೋರಿದ್ದೇವೆ: ಚುನಾವಣಾ ಆಯೋಗ

ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ವಿಧಾನಸಭೆ ಚುನಾವಣೆ ನಡೆಸಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್)ಯ 67 ತುಕಡಿಗಳನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಹಿಮಾಚಲ ಪ್ರದೇಶ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿಮ್ಲಾ: ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ವಿಧಾನಸಭೆ ಚುನಾವಣೆ ನಡೆಸಲು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್)ಯ 67 ತುಕಡಿಗಳನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಹಿಮಾಚಲ ಪ್ರದೇಶ ರಾಜ್ಯ ಚುನಾವಣಾ ಕಚೇರಿ ಶುಕ್ರವಾರ ತಿಳಿಸಿದೆ.

ಕೇಂದ್ರ ಚುನಾವಣಾ ಆಯೋಗ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟಿಸಿದ ನಂತರ 
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೀಶ್ ಗರ್ಗ್ ಈ ಮಾಹಿತಿ ನೀಡಿದ್ದಾರೆ.

ಕಳೆದ 2017 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ 65 ಸಿಎಪಿಎಫ್ ತುಕಡಿಗಳನ್ನು ನಿಯೋಜಿಸಲಾಗಿತ್ತು ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅಕ್ಟೋಬರ್ 17 ರಂದು ರಾಜ್ಯ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ಅಕ್ಟೋಬರ್ 25 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್ 27 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಕ್ಟೋಬರ್ 29 ಕೊನೆಯ ದಿನವಾಗಿದೆ ಎಂದು ಅವರು ತಿಳಿಸಿದ್ದಾರೆ.

ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಪ್ರಕಟವಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com