ದೆಹಲಿ: ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಶಿಕ್ಷಕಿ ಹುದ್ದೆಗೆ ಸಹೋದರಿ ಹೆಸರು ಶಿಫಾರಸು, ಸಹಾಯಕ ಪ್ರಾಧ್ಯಾಪಕನ ವಿರುದ್ಧ ದೂರು ದಾಖಲು

ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಎಂದು ಬಿಂಬಿಸಿಕೊಳ್ಳುವ ಮೂಲಕ ತನ್ನ ಸಹೋದರಿಯ ಹೆಸರನ್ನು ಶಿಕ್ಷಕಿ ಹುದ್ದೆಗೆ ಶಿಫಾರಸು ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸರು ಇಲ್ಲಿನ ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಎಲ್‌ಜಿ ಸಚಿವಾಲಯ ಶುಕ್ರವಾರ ತಿಳಿಸಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಎಂದು ಬಿಂಬಿಸಿಕೊಳ್ಳುವ ಮೂಲಕ ತನ್ನ ಸಹೋದರಿಯ ಹೆಸರನ್ನು ಶಿಕ್ಷಕಿ ಹುದ್ದೆಗೆ ಶಿಫಾರಸು ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸರು ಇಲ್ಲಿನ ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಎಲ್‌ಜಿ ಸಚಿವಾಲಯ ಶುಕ್ರವಾರ ತಿಳಿಸಿದೆ. 

ವಿಶ್ವವಿದ್ಯಾಲಯದ ಇಂಗ್ಲೀಷ್  ವಿಭಾಗದಲ್ಲಿ ತಾನೂ ಹೇಳಿದ ಅಭ್ಯರ್ಥಿಗೆ ಹುದ್ದೆ ನೀಡುವಂತೆ ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಸೆಪ್ಟೆಂಬರ್ 30 ಅಂದು ಅಪರಿಚಿತ ವ್ಯಕ್ತಿಯೊಬ್ಬರಿಂದ ಕುಲಪತಿ ಮಹೇಶ್ ವರ್ಮಾ ಅವರಿಗೆ ಕರೆ ಮಾಡಲಾಗಿತ್ತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಕರೆ ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಕುಲಪತಿ ಲೆಫ್ಟಿನೆಂಟ್ ಗವರ್ನರ್ ಸಚಿವಾಲಯವನ್ನು ಸಂಪರ್ಕಿಸಿದ್ದಾರೆ. ಆ ಸಂದರ್ಭದಲ್ಲಿ ಅಂತಹ ಯಾವುದೇ ಕರೆ ಮಾಡಿಲ್ಲ ಎಂಬುದು ತಿಳಿದುಬಂದ ನಂತರ ಪೊಲೀಸರಿಗೆ ದೂರು ನೀಡಲಾಗಿತ್ತು. 

ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಕರೆ ಮಾಡಿದ್ದಕ್ಕೆ ಅಕ್ಟೋಬರ್ 2 ರಂದು ದ್ವಾರಕಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿತ್ತು. ನಂತರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಯಿತು. "ತನಿಖೆಯ ಸಮಯದಲ್ಲಿ,  ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಆರೋಪಿ ಎಂದು ಗುರುತಿಸಲಾಗಿದೆ. ಅವರು ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದಲ್ಲಿ ತನ್ನ ಸಹೋದರಿಯ ನೇಮಕಾತಿಗಾಗಿ ಕರೆ ಮಾಡಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com