ಮುಂಬೈನಲ್ಲಿ ಭಾರೀ ಮಳೆ: 8 ವಿಮಾನಗಳ ಮಾರ್ಗ ಬದಲಾವಣೆ
ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ 8 ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.
ಗೋಚರತೆ ಅತ್ಯಂತ ನಿಕೃಷ್ಟ ಮಟ್ಟಕ್ಕೆ ಇಳಿದ ಪರಿಣಾಮ ಶುಕ್ರವಾರ ನಗರದ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿದ್ದ ಎಂಟು ವಿಮಾನಗಳ ಮಾರ್ಗವನ್ನು ಸಮೀಪದ ವಿಮಾನ ನಿಲ್ದಾಣಕ್ಕೆ ಬದಲಾಯಿಸಲಾಗಿದೆ.
ಪ್ರತಿಕೂಲ ಹವಾಮಾನ ಪರಿಸ್ಥಿತಿಯ ಕಾರಣ, ಮುನ್ನೆಚ್ಚರಿಕೆ ಕ್ರಮವಾಗಿ ಸುಮಾರು ಎಂಟು ವಿಮಾನಗಳನ್ನು ಹತ್ತಿರದ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ ಎಂದು ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಕಟಣೆಯಲ್ಲಿ ತಿಳಿಸಿದೆ.
ಮುಂಬೈನ ಹಲವಾರು ಭಾಗಗಳಲ್ಲಿ, ವಿಶೇಷವಾಗಿ ಪೂರ್ವ ಉಪನಗರಗಳಲ್ಲಿ ಶುಕ್ರವಾರ ಸಂಜೆ ಭಾರೀ ಮಳೆಯಾಗಿದೆ.
ಬೆಳಗ್ಗೆ 8 ಗಂಟೆಯಿಂದ ನಗರದಲ್ಲಿ 8.23 ಮಿಮೀ ಮಳೆಯಾಗಿದ್ದು, ಪಶ್ಚಿಮ ಉಪನಗರಗಳಲ್ಲಿ 19.72 ಮಿಮೀ ಮತ್ತು ಪೂರ್ವ ಉಪನಗರಗಳಲ್ಲಿ 27.66 ಮಿಮೀ ಮಳೆಯಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ