ಕೋವಿಡ್-19: ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, 17 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,430 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,26,427ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 26,618ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,430 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,26,427ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 26,618ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ 9 ಮಂದಿ ಸೇರಿದಂತೆ 17 ಮಂದಿ ಸಾವಿಗೀಡಾಗಿದ್ದು, ಈವರೆಗೆ 5,28,874 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06 ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.76ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಸದ್ಯ ದೈನಂದಿನ ಪಾಸಿಟಿವಿಟಿ ದರ ಶೇ 1.01ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಾದ್ಯಂತ ಈವರೆಗೆ 4,40,70,935 ಜನರು ಕೊರೊನಾವೈರಸ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸಚಿವಾಲಯದ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 219.27 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com