ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಬಳ್ಳಾರಿಯಲ್ಲಿ ಮತ ಚಲಾಯಿಸಲಿದ್ದಾರೆ ರಾಹುಲ್ ಗಾಂಧಿ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ(ಅಕ್ಟೋಬರ್ 17) ಚುನಾವಣೆ ನಡೆಯಲಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ನಡೆಸುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಳ್ಳಾರಿಯಲ್ಲಿ ತಾವು ತಂಗಿರುವ ಶಿಬಿರದಲ್ಲಿಯೇ...
ಯಾತ್ರೆಯಲ್ಲಿ ರಾಹುಲ್ ಗಾಂಧಿ
ಯಾತ್ರೆಯಲ್ಲಿ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ(ಅಕ್ಟೋಬರ್ 17) ಚುನಾವಣೆ ನಡೆಯಲಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿ ನಡೆಸುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಳ್ಳಾರಿಯಲ್ಲಿ ತಾವು ತಂಗಿರುವ ಶಿಬಿರದಲ್ಲಿಯೇ ಮತ ಚಲಾಯಿಸಲಿದ್ದು, ನಿರ್ಗಮಿತ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಮತ ಚಲಾಯಿಸಲಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿರುವ ರಾಹುಲ್ ಗಾಂಧಿ ಹಾಗೂ ಸುಮಾರು 40 ಪಿಸಿಸಿ ಪ್ರತಿನಿಧಿಗಳು ಬಳ್ಳಾರಿಯ ಸಂಗನಕಲ್ಲುನಲ್ಲಿರುವ ಯಾತ್ರೆಯ ಶಿಬಿರದಲ್ಲಿ ಮತದಾನ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಹ ದೆಹಲಿಯ ಪಕ್ಷದ ಕೇಂದ್ರ ಕಚೇರಿಯಲ್ಲಿ ಮತ ಚಲಾಯಿಸಲಿದ್ದಾರೆ.

ಅಕ್ಟೋಬರ್ 17 ರಂದು ನಡೆಯಲಿರುವ ಚುನಾವಣೆಗೆ ಎಲ್ಲಾ ರಾಜ್ಯಗಳಲ್ಲಿ 67 ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರ(ಸಿಇಎ) ತಿಳಿಸಿದೆ.

ಸಿಇಎ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಮಾತನಾಡಿ, ‘ಎಐಸಿಸಿಯಲ್ಲೂ ಪ್ರಮುಖವಾಗಿ ಎಲ್ಲ ಹಿರಿಯ ನಾಯಕರು, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಬೇರೆ ರಾಜ್ಯದವರಾಗಿದ್ದು, ದೆಹಲಿಯಲ್ಲಿ ನೆಲೆಸಿರುವ ಗುರುತಿನ ಚೀಟಿ ಹೊಂದಿರುವ ಎಲ್ಲರೂ ಎಐಸಿಸಿ ಕಚೇರಿಯಲ್ಲಿ ಮತ ಚಲಾಯಿಸಬಹುದು ಎಂದು ತಿಳಿಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿರುವ ರಾಹುಲ್ ಗಾಂಧಿ ಹಾಗೂ ಇತರರಿಗೆ ಕ್ಯಾಂಪ್ ನಲ್ಲಿಯೇ ಬೂತ್ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com