ನವದೆಹಲಿ: ದೇಶದ ಅತಿ ಹಳೆಯ ಪಕ್ಷವಾದ ಕಾಂಗ್ರೆಸ್'ನ ಅಧ್ಯಕ್ಷ ಗಾದಿಗೆ ಸೋಮವಾರ ಮತದಾನ ಆರಂಭವಾಗಿದ್ದು, ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ.
ಬೆಳಿಗ್ಗೆ 10 ಗಂಟೆಯಿಂದಲೇ ಎಐಸಿಸಿ ಕಚೇರಿಯಲ್ಲಿ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಸತತ ಅವಿರೋಧ ಆಯ್ಕೆಗಳ ಬಳಿಕ 22 ವರ್ಷಗಳ ನಂತರ ಚುನಾವಣೆ ನಡೆಯುತ್ತಿದ್ದು, ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಅವರು ಚುನಾವಣೆಯಲ್ಲಿ ಮುಖಾಮುಖಿಯಾಗಿದ್ದಾರೆ. ಪಕ್ಷದ 9100 ಪ್ರತಿನಿಧಿಗಳು ಇವರ ಹಣೆಬರಹ ನಿರ್ಧರಿಸಲಿದ್ದಾರೆ.
ಚುನಾವಣೆಗೆ ದೇಶದ ವಿವಿಧ ಭಾಗಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 65 ಮತಗಟ್ಟೆಗಳನ್ನು ತೆರೆಯಲಾಗಿದೆ. ಅ.19ರಂದು ಐಐಸಿಸಿ ಕಚೇರಿಯಲ್ಲಿ ಮತ ಎಣಿಕೆ ನಡೆಯಲಿದ್ದು, ಅಂದು ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ.
ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರೆ ಕಾಂಗ್ರೆಸ್ ನಾಯಕರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ತಮ್ಮ ಹಕ್ಕು ಚಲಾಯಿಸಿದರು.
Advertisement