ಅಲ್ಪಸಂಖ್ಯಾತ ಸ್ಥಾನಮಾನ ಕಲ್ಪಿಸುವಂತೆ ಸ್ಮಾರ್ಥ ಬ್ರಾಹ್ಮಣರು ಸಲ್ಲಿಸಿದ್ದ ಮೇಲ್ಮನವಿ ಸುಪ್ರೀಂ ಕೋರ್ಟ್ ನಲ್ಲಿ ವಜಾ
ತಮಿಳುನಾಡಿನಲ್ಲಿ ನೆಲೆಸಿರುವ ಮತ್ತು ಅದ್ವೈತದ ಧಾರ್ಮಿಕ ತತ್ವವನ್ನು ಪ್ರಚಾರ ಮಾಡುತ್ತಿರುವ ಸ್ಮಾರ್ಥ ಬ್ರಾಹ್ಮಣರು ಅಲ್ಪಸಂಖ್ಯಾತ ಸ್ಥಾನಮಾನಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ನವದೆಹಲಿ: ತಮಿಳುನಾಡಿನಲ್ಲಿ ನೆಲೆಸಿರುವ ಮತ್ತು ಅದ್ವೈತದ ಧಾರ್ಮಿಕ ತತ್ವವನ್ನು ಪ್ರಚಾರ ಮಾಡುತ್ತಿರುವ ಸ್ಮಾರ್ಥ ಬ್ರಾಹ್ಮಣರು ಅಲ್ಪಸಂಖ್ಯಾತ ಸ್ಥಾನಮಾನಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಎಸ್ ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಮದ್ರಾಸ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ, ಸ್ಮಾರ್ಥ ಬ್ರಾಹ್ಮಣರು ಧಾರ್ಮಿಕ ಪಂಗಡವಲ್ಲ. ಆದ್ದರಿಂದ ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಲಾಗುವುದಿಲ್ಲ. ಅನೇಕ ಜನರು ಅದ್ವೈತ ತತ್ವವನ್ನು ಅನುಸರಿಸುತ್ತಾರೆ. ಹೀಗಾದರೆ, ನಾವು ಅಲ್ಪಸಂಖ್ಯಾತರ ರಾಷ್ಟ್ರವನ್ನು ಹೊಂದುತ್ತೇವೆ ಎಂದು ಪೀಠ ಆಕ್ಷೇಪ ವ್ಯಕ್ತಪಡಿಸಿದೆ.
ಕಳೆದ ಜೂನ್ 7ರಂದು ಮದ್ರಾಸ್ ಹೈಕೋರ್ಟ್, ಸ್ಮಾರ್ಥ ಬ್ರಾಹ್ಮಣರು ಭಾರತದ ಸಂವಿಧಾನದ 26 (ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವ ಸ್ವಾತಂತ್ರ್ಯ) ಅಡಿಯಲ್ಲಿ ಪ್ರಯೋಜನಗಳಿಗೆ ಅರ್ಹರಲ್ಲ ಎಂದು ಹೇಳಿತ್ತು.
"ಸ್ಮಾರ್ಥ ಬ್ರಾಹ್ಮಣರು ಜಾತಿ/ಸಮುದಾಯಕ್ಕೆ ಯಾವುದೇ ವಿಶಿಷ್ಟತೆಯಿಲ್ಲದೆ, ಮೀಸಲಾತಿ ನೀಡಿದರೆ ತಮಿಳುನಾಡು ರಾಜ್ಯದ ಇತರ ಬ್ರಾಹ್ಮಣರಿಂದ ಅವರನ್ನು ಪ್ರತ್ಯೇಕಿಸುತ್ತದೆ. ಆದ್ದರಿಂದ, ಅವರು ತಮ್ಮನ್ನು ತಾವು ಧಾರ್ಮಿಕ ಪಂಗಡ ಎಂದು ಕರೆದುಕೊಳ್ಳಲು ಸಾಧ್ಯವಿಲ್ಲ. ಪರಿಣಾಮವಾಗಿ, ಅವರು ಭಾರತದ ಸಂವಿಧಾನದ 26 ನೇ ವಿಧಿಯ ಅಡಿಯಲ್ಲಿ ಪ್ರಯೋಜನಗಳಿಗೆ ಅರ್ಹರಲ್ಲ. ಎಂದು ಹೈಕೋರ್ಟ್ ತೀರ್ಪು ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


