ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ

ಎರಡು ದಶಕಗಳ ನಂತರ ಕಾಂಗ್ರೆಸ್‌ನ ಮೊದಲ ಗಾಂಧಿಯೇತರ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕ ಮೂಲಕ, ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. 
Published on

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕ ಮೂಲಕ, ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. 

ಚಲಾವಣೆಯಾದ ಒಟ್ಟು 9.385 ಮತಗಳಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಪರವಾಗಿ 7 ಸಾವಿರದ 897 ಮತಗಳು, ಸಂಸದ ಶಶಿ ತರೂರ್ ಪರವಾಗಿ ಸಾವಿರದ 1,072 ಮತಗಳು ಲಭಿಸಿವೆ. ಇನ್ನು 400ಕ್ಕೂ ಹೆಚ್ಚು ಮತಗಳು ತಿರಸ್ಕೃತಗೊಂಡಿವೆ. 

ಈ ಮೂಲಕ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಕೂರಲಿದ್ದು, 24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 

ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ಪರಾಜಿತ ಅಭ್ಯರ್ಥಿ ಶಶಿ ತರೂರ್ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ಪುನರುಜ್ಜೀವನ ಆರಂಭವಾಗಿದೆ ಎಂದು ನಾನು ನಂಬುತ್ತೇನೆ ಎಂದು ಹೇಳಿಕೆಯಲ್ಲಿ ಶಶಿ ತರೂರ್ ಹೇಳಿದ್ದಾರೆ. ಮೊನ್ನೆ ಮತದಾನದ ದಿನವೂ ಶಶಿ ತರೂರ್ ಈ ಮಾತುಗಳನ್ನು ಹೇಳಿದ್ದರು.

2017 ಮತ್ತು 2019 ರ ನಡುವಿನ ಎರಡು ವರ್ಷಗಳನ್ನು ಹೊರತುಪಡಿಸಿ ರಾಹುಲ್ ಗಾಂಧಿಯವರು ಅಧಿಕಾರ ವಹಿಸಿಕೊಂಡ ನಂತರ 1998 ರಿಂದ ಚುಕ್ಕಾಣಿ ಹಿಡಿದಿರುವ ಸೋನಿಯಾ ಗಾಂಧಿಯವರ ಸ್ಥಾನವನ್ನು ಖರ್ಗೆ ಅವರು ಬದಲಾಯಿಸಲಿದ್ದಾರೆ.

ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಿಸ್ತ್ರಿ ಪಕ್ಷದ ಅಧ್ಯಕ್ಷೀಯ ಚುನಾವಣೆ ಪ್ರಕ್ರಿಯೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿ ಇದು "ಮುಕ್ತ, ನ್ಯಾಯಯುತ ಮತ್ತು ಪಾರದರ್ಶಕ" ಎಂದು ಹೇಳಿದ್ದರು. ಇದು ರಹಸ್ಯ ಮತದಾನವಾಗಿದ್ದು, ಯಾರು ಯಾರಿಗೆ ಮತ ಹಾಕಿದರು ಎಂಬುದು ಯಾರಿಗೂ ತಿಳಿಯುವುದಿಲ್ಲ ಎಂದು ಹೇಳಿದ್ದರು. 

ಗುಪ್ತ ಮತದಾನದಲ್ಲಿ ಪಕ್ಷದ ಮುಖ್ಯಸ್ಥರನ್ನು ಆಯ್ಕೆ ಮಾಡಲು ಎಲೆಕ್ಟೊರಲ್ ಕಾಲೇಜು ರಚಿಸಿದ ಒಟ್ಟು 9,915 ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಪ್ರತಿನಿಧಿಗಳಲ್ಲಿ 9,500 ಕ್ಕೂ ಹೆಚ್ಚು ಜನರು ಪಿಸಿಸಿ ಕಚೇರಿಗಳು ಮತ್ತು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಮತ ಚಲಾಯಿಸಿದ್ದಾರೆ. ಚುನಾವಣೆಗೂ ಮುನ್ನ, ಖರ್ಗೆ ಅವರು ಪಕ್ಷದ ಅಧ್ಯಕ್ಷರಾದರೆ, ಪಕ್ಷದ ವ್ಯವಹಾರಗಳನ್ನು ನಡೆಸುವಲ್ಲಿ ಗಾಂಧಿ ಕುಟುಂಬದ ಸಲಹೆ ಮತ್ತು ಬೆಂಬಲವನ್ನು ಪಡೆಯುತ್ತೇನೆ ಎಂದು ಹೇಳಿದ್ದರು. 

ಕರ್ನಾಟಕ ಮೂಲದವರಾದ ಖರ್ಗೆಯವರ ಗೆಲುವಿಗೆ ಕರ್ನಾಟಕ ಮತ್ತು ದೆಹಲಿಯಲ್ಲಿ ಅವರ ಕಚೇರಿ ಮುಂದೆ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com