
ಅಜಂಗಢ: ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ದಲಿತ ಬಾಲಕಿಯ ಕತ್ತರಿಸಿದ ರೀತಿಯಲ್ಲಿರುವ ಶವ ಗುರುವಾರ ಅಜಂಗಢದಲ್ಲಿನ ಪೊದೆಗಳಲ್ಲಿ ಪತ್ತೆಯಾಗಿದೆ. ಅಕ್ಟೋಬರ್ 15 ರಿಂದ ಬಾಲಕಿ ಕಾಣೆಯಾಗಿದ್ದು, ಆಕೆಯ ತಂದೆ ದೂರು ದಾಖಲಿಸಿದ್ದರು.
ಮಜೌಲಿ ಗ್ರಾಮದ ಗ್ರಾಮಸ್ಥರು ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬೆರಳಚ್ಚು ತಂಡ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ತಂಡದೊಂದಿಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪ್ರಕರಣದ ತನಿಖೆಗಾಗಿ ತಂಡವನ್ನು ರಚಿಸಲಾಗಿದ್ದು, ಅಪರಾಧಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಅಜಂಗಢ್‌ನ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ರುಶಿಯಾ ತಿಳಿಸಿದ್ದಾರೆ.
Advertisement