ಪ್ಲಾಸ್ಮಾ ಬದಲಿಗೆ ಡ್ರಿಪ್ಸ್ ನಲ್ಲಿ ಮೂಸಂಬಿ ರಸ: ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ಸೀಜ್

ಡ್ರಿಪ್ಸ್ ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಇಡೀ ಆಸ್ಪತ್ರೆಯನ್ನು ವೈದ್ಯಾಧಿಕಾರಿಗಳು ಸೀಜ್ ಮಾಡಿದ್ದಾರೆ.
ಪ್ಲಾಸ್ಮಾ ಪ್ಯಾಕೆಟ್ ನಲ್ಲಿ ಮೂಸಂಬಿ ರಸ
ಪ್ಲಾಸ್ಮಾ ಪ್ಯಾಕೆಟ್ ನಲ್ಲಿ ಮೂಸಂಬಿ ರಸ
Updated on

ಪ್ರಯಾಗರಾಜ್‌: ಡ್ರಿಪ್ಸ್ ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಇಡೀ ಆಸ್ಪತ್ರೆಯನ್ನು ವೈದ್ಯಾಧಿಕಾರಿಗಳು ಸೀಜ್ ಮಾಡಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗರಾಜ್‌ (ಅಲಹಾಬಾದ್)ನಲ್ಲಿ ಜಾಲ್ವಾ ಎಂಬಲ್ಲಿ ಈ ಘಟನೆ ನಡೆದಿದ್ದು, ಡೆಂಗಿ ರೋಗಿಯೊಬ್ಬರ ದೇಹಕ್ಕೆ ಪ್ಲಾಸ್ಮಾ ನೀಡುವುದಕ್ಕೆ ಬದಲಾಗಿ ಮೂಸಂಬಿ ರಸ ನೀಡಲಾಗಿದ್ದು, ರೋಗಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ದೇಹಕ್ಕೆ ಮೂಸಂಬಿ ರಸ ಸೇರಿದ ಕಾರಣಕ್ಕೆ ರೋಗಿ ಪ್ರದೀಪ್‌ ಪಾಂಡೆ ಎಂಬ ರೋಗಿ ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಉತ್ತರ ಪ್ರದೇಶದಲ್ಲಿ ನಕಲಿ ರಕ್ತನಿಧಿಗಳ ಅಕ್ರಮ ಬಯಲಾಗಿದೆ.

ಪ್ಲಾಸ್ಮಾ ಪೊಟ್ಟಣದಲ್ಲಿ ಮೂಸಂಬಿ ರಸ ಇರುವುದನ್ನು ಪತ್ರಕರ್ತರೊಬ್ಬರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. 

ಇದೀಗ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಗುರುವಾರ ತಿಳಿಸಿದ್ದಾರೆ.  ‘ಕೆಲವೇ ಗಂಟೆಗಳಲ್ಲಿ ಪರೀಕ್ಷಾ ವರದಿ ಬರಲಿದೆ. ಪ್ರಕರಣದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಪಾಠಕ್ ತಿಳಿಸಿದ್ದಾರೆ.

ಪ್ರಸ್ತುತ ಮುಂಜಾಗ್ರತಾ ಕ್ರಮವಾಗಿ ಇಡೀ ಆಸ್ಪತ್ರೆಯನ್ನು ಸೀಜ್ ಮಾಡಲಾಗಿದ್ದು, ಅಲ್ಲಿನ ರೋಗಿಗಳನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಅಲ್ಲಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ರಜೆ ತೆಗೆದುಕೊಳ್ಳುವುದನ್ನು ನಿರ್ಬಂಧಿಸಲಾಗಿದೆ. ಡೆಂಗಿ ನಿಯಂತ್ರಣ ಮತ್ತು ತಡೆಗಟ್ಟುವಿಕೆಗೆ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸುವಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಇಲ್ಲಿನ ಮುನ್ಸಿಪಲ್ ಕಾರ್ಪೊರೇಷನ್‌ಗೆ ಸೂಚಿಸಿತ್ತು. ಲಖನೌ ಪೀಠವು ವೈದ್ಯಕೀಯ ಸೌಲಭ್ಯಗಳ ಉನ್ನತೀಕರಣದ ಬಗ್ಗೆ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಈ ಮಧ್ಯೆ, ಮೂಸಂಬಿ ರಸ ನೀಡಿದ ಕಾರಣಕ್ಕೆ ರೋಗಿಯೊಬ್ಬರು ಕೊನೆಯುಸಿರೆಳೆದಿರುವುದು ಸರ್ಕಾರವನ್ನು ಬೆಚ್ಚಿ ಬೀಳಿಸಿದೆ. 

ಉತ್ತರ ಪ್ರದೇಶ, ಪಂಜಾಬ್ ಮತ್ತು ರಾಜಸ್ಥಾನದಲ್ಲಿ 2021 ರಲ್ಲಿ ಕ್ರಮವಾಗಿ 29,750, 23,389 ಮತ್ತು 20,749 ಡೆಂಗಿ ಪ್ರಕರಣಗಳು ದಾಖಲಾಗಿವೆ. 2021 ರಲ್ಲಿ ದೇಶದಾದ್ಯಂತ ಒಟ್ಟು 1.93 ಲಕ್ಷ ಪ್ರಕರಣಗಳು ವರದಿಯಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com