ಪಂಜಾಬ್ ಸರ್ಕಾರಿ ನೌಕರರಿಗೆ ಮಾನ್ ದೀಪಾವಳಿ ಬಂಪರ್ ಗಿಫ್ಟ್: ಹಳೆ ಪಿಂಚಣಿ ಯೋಜನೆ ಜಾರಿ

ಭಗವಂತ್ ಮಾನ್ ನೇತೃತ್ವದ ಆಪ್ ಸರ್ಕಾರ ಪಂಜಾಬ್ ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್ ನೀಡಿದ್ದು, ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡಲು ಶುಕ್ರವಾರ ನಿರ್ಧರಿಸಿದೆ.
ಭಗವಂತ್ ಮಾನ್
ಭಗವಂತ್ ಮಾನ್

ಚಂಡೀಗಢ: ಭಗವಂತ್ ಮಾನ್ ನೇತೃತ್ವದ ಆಪ್ ಸರ್ಕಾರ ಪಂಜಾಬ್ ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್ ನೀಡಿದ್ದು, ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡಲು ಶುಕ್ರವಾರ ನಿರ್ಧರಿಸಿದೆ.

ಇದನ್ನು ದೀಪಾವಳಿ ಉಡುಗೊರೆ ಎಂದು ಬಣ್ಣಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್‌ ಅವರು, ‘ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದ ಲಕ್ಷಾಂತರ ಉದ್ಯೋಗಿಗಳಿಗೆ ಅನುಕೂಲವಾಗಲಿದೆ. ಜೊತೆಗೆ ಉದ್ಯೋಗಿಗಳಿಗೆ ಶೇಕಡಾ 6ರಷ್ಟು ತುಟ್ಟಿಭತ್ಯೆ ಸಹ ನೀಡಲಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ.

ಹಳೆಯ ಪಿಂಚಣಿ ಯೋಜನೆಗೆ ಸೇರಲು ನೌಕರರಿಗೆ ಆಯ್ಕೆಯನ್ನು ನೀಡಲಾಗುವುದು ಎಂದು ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಹೇಳಿದ್ದಾರೆ.

ಗುಜರಾತ್‌ ಮತ್ತು ಹಿಮಾಚಲ ಪ್ರದೇಶದಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದರೆ ಇಲ್ಲಿಯೂ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರುಜಾರಿ ಮಾಡುವುದಾಗಿ ಆಪ್ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಭರವಸೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com