ದೀಪೋತ್ಸವ: ಅಯೋಧ್ಯೆಗಿಂದು ಪ್ರಧಾನಿ ಮೋದಿ ಭೇಟಿ, ಎಲ್ಲೆಡೆ ಬಿಗಿ ಭದ್ರತೆ ನಿಯೋಜನೆ

ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ನಡೆಯುವ ದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.
ಉತ್ತರಪ್ರದೇಶದ ರಸ್ತೆಗಳಲ್ಲಿ ಬಿಗಿ ಭದ್ರತೆ ನಿಯೋಜನೆಗೊಳಿಸಿರುವುದು.
ಉತ್ತರಪ್ರದೇಶದ ರಸ್ತೆಗಳಲ್ಲಿ ಬಿಗಿ ಭದ್ರತೆ ನಿಯೋಜನೆಗೊಳಿಸಿರುವುದು.

ಅಯೋಧ್ಯೆ: ಬೆಳಕಿನ ಹಬ್ಬ ದೀಪಾವಳಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಸರಯು ನದಿ ತೀರದಲ್ಲಿ ನಡೆಯುವ ದೀಪೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿಯವರು ಅಯೋಧ್ಯೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಲ್ಲೆಡೆ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. 

ಪ್ರತೀ ವರ್ಷದಂತೆ ಪ್ರಧಾನಿ ಮೋದಿ ನಾಳೆ ದೇಶದ ಸೈನಿಕರ ಜೊತೆಗೆ ದೀಪಾವಳಿಯನ್ನು ಆಚರಿಸಲಿದ್ದಾರೆ. ಆದರೆ ಅದಕ್ಕೂ ಮುನ್ನ ಇಂದು ಅಯೋಧ್ಯೆಯಲ್ಲಿ ಬೆಳಕಿನ ಹಬ್ಬಕ್ಕೆ ಚಾಲನೆ ನೀಡುತ್ತಿದ್ದಾರೆ. ಈ ಮೂಲಕ ಅಲ್ಲಿ ನಡೆಯುವ ದಾಖಲೆಯ ದೀಪೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗುತ್ತಿದ್ದಾರೆ. 

ಪ್ರತಿ ಬಾರಿಯಂತೆ ಈ ಬಾರಿಯೂ ಅಯೋಧ್ಯೆಯಲ್ಲಿ ವಿಶೇಷವಾಗಿ ದೀಪಾವಳಿಯನ್ನು ಉತ್ತರ ಸರ್ಕಾರ ಆಚರಿಸುತ್ತಿದೆ. ಸರಯೂ ನದಿ ನಟದಲ್ಲಿ 15 ಲಕ್ಷ ದೀಪಗಳನ್ನು ಹಚ್ಚುವ ಮೂಲಕ ಹೊಸ ಗಿನ್ನಿಸ್ ದಾಖಲೆ ಸೃಷ್ಟಿ ಮಾಡಲಾಗುತ್ತಿದೆ. ಈಗಾಗಲೇ ಗಿನ್ನಿಸ್ ರೆಕಾರ್ಡ್ ತಂಡ ಅಯೋಧ್ಯೆ ತಲುಪಿದ್ದು, ಹಣತೆಗಳ ಎಣಿಕೆ ಶುರು ಮಾಡಿದೆ. ಇಂದು ಸಂಜೆ ಈ ಎಲ್ಲ ದೀಪಗಳು ಬೆಳಗಲಿದ್ದು, ಬಳಿಕ ಅಯೋಧ್ಯೆಯಲ್ಲಿ ಹೊಸ ದಾಖಲೆ ಸೃಷ್ಟಿಯಾಲಿದೆ. ಇಂಥ ಅದ್ಭುತ ದೀಪೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸಾಕ್ಷಿಯಾಗುತ್ತಿದ್ದಾರೆ.

ಇಂದು ಸಂಜೆ 5 ಗಂಟೆಗೆ ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಸಂಜೆ 5.45ಕ್ಕೆ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ರಾಮ ಮಂದಿರ ನಿರ್ಮಾಣಾ ಕಾರ್ಯ ವೀಕ್ಷಿಸಿ, ಶ್ರೀರಾಮ ಕಥಾ ಪಾರ್ಕ್‍ನಲ್ಲಿ ಶ್ರೀರಾಮನಿಗೆ ಜರುಗಲಿರುವ ಸಾಂಕೇತಿಕ ರಾಜ್ಯಾಭಿಷೇಕದಲ್ಲಿ ಭಾಗಿಯಾಗಲಿದ್ದಾರೆ. 

ಸಂಜೆ 6.30ಕ್ಕೆ ಸರಯೂ ನದಿ ತೀರದ ಮಹಾ ಆರತಿಯಲ್ಲಿ ಪಾಲ್ಗೊಂಡು, ರಾಮ್ ಕಿ ಪೌಡಿಯಲ್ಲಿ ನಡೆಯಲಿರುವ 3-ಡಿ ‘ಹೊಲೊಗ್ರಾಫಿಕ್ ಪ್ರೊಜೆಕ್ಷನ್ ಮ್ಯಾಪಿಂಗ್ ಶೋ’ ಮತ್ತು ಮ್ಯೂಸಿಕಲ್ ಲೇಸರ್ ಶೋಗೆ ಸಾಕ್ಷಿಯಾಗಲಿದ್ದಾರೆ.

ಇನ್ನು ಇದೇ ವೇಳೆ ರಾಮಲಲ್ಲಾಗೆ ಸಂಬಂಧಿಸಿದ 11 ವಿವಿಧ ರಾಜ್ಯಗಳ ಸ್ತಬ್ಧ ಚಿತ್ರ ಪ್ರದರ್ಶನವಾಗಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಪ್ರಧಾನಿ ಮೋದಿ ನಾಳೆ ಸೈನಿಕರ ಜೊತೆಗೆ ದೀಪಾವಳಿ ಆಚರಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com