ಅಪಹರಣಕ್ಕೊಳಗಾಗಿದ್ದ ದಲಿತ ಬಾಲಕಿ ಶವವಾಗಿ ಪತ್ತೆ; ಹಂತಕರ ಬಂಧನಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

ಐದು ದಿನಗಳ ಹಿಂದೆ ತನ್ನ ಗ್ರಾಮದಿಂದಲೇ ಅಪಹರಿಸಲಾಗಿತ್ತು ಎನ್ನಲಾದ 16 ವರ್ಷದ ದಲಿತ ಬಾಲಕಿ ಮಧ್ಯಪ್ರದೇಶದ ಗುನಾ ಜಿಲ್ಲೆಯ ಹೊಲವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಭಿಂಡ್: ಐದು ದಿನಗಳ ಹಿಂದೆ ತನ್ನ ಗ್ರಾಮದಿಂದ ಅಪಹರಿಸಲಾಗಿತ್ತು ಎನ್ನಲಾದ 16 ವರ್ಷದ ದಲಿತ ಬಾಲಕಿ ಮಧ್ಯಪ್ರದೇಶದ ಗುನಾ ಜಿಲ್ಲೆಯ ಹೊಲವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ 11ನೇ ತರಗತಿಯ ವಿದ್ಯಾರ್ಥಿಯ ಕೊಳೆತ ಶವ ಪತ್ತೆಯಾಗಿದ್ದು, ಆಕೆಯ ಹಂತಕರನ್ನು ತಕ್ಷಣವೇ ಬಂಧಿಸಬೇಕು ಎಂದು ಒತ್ತಾಯಿಸಿ ಆಕೆಯ ಸಂಬಂಧಿಕರು ಪ್ರತಿಭಟನೆ ನಡೆಸಿದರು.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಗುಣ ಜಿಲ್ಲೆಯ ಮುಖ್ಯಸ್ಥ ದಿಲೀಪ್ ಬೌಧ್, ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿದೆ ಮತ್ತು ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ ಬಾಲಕಿ ನಿಗೂಢವಾಗಿ ವೃತಪಟ್ಟಿದ್ದು, ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ.

ಅಕ್ಟೋಬರ್ 19 ರಂದು ಶಾಲೆಯಿಂದ ಹಿಂತಿರುಗುತ್ತಿದ್ದಾಗ ಆಕೆಯನ್ನು ಅಪಹರಿಸಲಾಗಿತ್ತು. ಆಕೆಯ ಅಜ್ಜ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿದ್ದಾರೆ.

ಗ್ರಾಮದ ಸಮೀಪದ ಹೊಲವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆಕೆಯ ಶಾಲಾ ಬ್ಯಾಗ್ ಮತ್ತು ಆಕೆ ಶಾಲೆಗೆ ಹೋಗಿದ್ದ ಸೈಕಲ್ ಸಹ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಮಲೇಶ್ ಕುಮಾರ್ ಖಾರ್ಪುಸೆ ಭಾನುವಾರ ತಿಳಿಸಿದ್ದಾರೆ.

ಶವ ಪತ್ತೆಯಾದ ನಂತರ, ಬಾಲಕಿಯ ಸಂಬಂಧಿಕರು ಮತ್ತು ಇತರ ಜನರು ಪ್ರತಿಭಟನೆ ನಡೆಸಿದರು ಮತ್ತು ಆಕೆಯ ಹಂತಕರನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ಜನನಿಬಿಡ ರಸ್ತೆಯನ್ನು ತಡೆದರು.
ಪ್ರತಿಭಟನೆಯ ನಂತರ, ಸಂತ್ರಸ್ತೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಗ್ವಾಲಿಯರ್‌ಗೆ ಸ್ಥಳಾಂತರಿಸಲಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಿಎಸ್‌ಪಿ ನಾಯಕ ಬೌಧ್ ಮತ್ತು ಅವರ ಬೆಂಬಲಿಗರು ಮೃತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com