
ಮುಂಬೈ: ಬೆಳಕಿನ ಹಬ್ಬ ದೀಪಾವಳಿಯ ಸಡಗರ, ಸಂಭ್ರಮ ದೇಶಾದ್ಯಂತ ಮನೆ ಮಾಡಿದ್ದು, ಪಟಾಕಿಗಳ ಆರ್ಭಟ ಮುಗಿಲು ಮುಟ್ಟಿದೆ. ಈ ನಡುವೆ ವಾಣಿಜ್ಯ ನಗರಿ ಮುಂಬೈಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ.
ಪಟಾಕಿ ಹೊಡಿಬೇಡಿ ಅಂದಿದ್ದಕ್ಕೆ ಆಕ್ರೋಶಗೊಂಡ ಇಬ್ಬರು ಅಪ್ರಾಪ್ತರು 21 ವರ್ಷದ ಯುವಕನನ್ನು ಹತ್ಯೆ ಮಾಡಿದ್ದಾರೆ. ಅದು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು, ಬಾಲಾಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿಯ ಹುಡುಕಾಟ ನಡೆದಿದೆ.
ಈ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 ರಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement