ವಡೋದರಾ: ದೀಪಾವಳಿಯಂದು ಪಟಾಕಿ ಸಿಡಿಸುವ ವಿಚಾರವಾಗಿ ಕೋಮು ಘರ್ಷಣೆ; 19 ಜನರ ಬಂಧನ

ದೀಪಾವಳಿಯಂದು ಗುಜರಾತ್‌ನ ವಡೋದರಾ ನಗರದಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಎರಡು ಸಮುದಾಯದ ಗುಂಪಿನ ನಡುವೆ ಘರ್ಷಣೆ ಸಂಭವಿಸಿದ್ದು, ಎರಡು ಕಡೆಯ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ವಡೋದರಾ: ದೀಪಾವಳಿಯಂದು ಗುಜರಾತ್‌ನ ವಡೋದರಾ ನಗರದಲ್ಲಿ ಪಟಾಕಿ ಸಿಡಿಸುವ ವಿಚಾರದಲ್ಲಿ ಎರಡು ಸಮುದಾಯದ ಗುಂಪಿನ ನಡುವೆ ಘರ್ಷಣೆ ಸಂಭವಿಸಿದ್ದು, ಎರಡು ಕಡೆಯ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ 12.45 ರ ಸುಮಾರಿಗೆ ಕೋಮು ಸೂಕ್ಷ್ಮ ಪಾಣಿಗೇಟ್ ಪ್ರದೇಶದಲ್ಲಿ ಘರ್ಷಣೆ ನಡೆದಿದೆ.

ಬಂಧಿತರಲ್ಲಿ ಘರ್ಷಣೆ ಸಂಭವಿಸಿದ ಸುಮಾರು ಒಂದು ಗಂಟೆಯ ನಂತರ ಸ್ಥಳೀಯ ಮನೆಯೊಂದರ ಮೂರನೇ ಮಹಡಿಯಿಂದ ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್ ಎಸೆದ ವ್ಯಕ್ತಿಯೂ ಸೇರಿದ್ದಾರೆ ಎಂದು ವಡೋದರಾ ಉಪ ಪೊಲೀಸ್ ಆಯುಕ್ತ ಯಶಪಾಲ್ ಜಗನಿಯಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಘರ್ಷಣೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ, ರಾಕೆಟ್ ಪಟಾಕಿ ಬಿದ್ದ ನಂತರ ಸ್ಥಳದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಅವರು ಹೇಳಿದರು.

'ಪಟಾಕಿ ಸಿಡಿಸುವ ಮತ್ತು ರಾಕೆಟ್ ಬಾಂಬ್‌ಗಳನ್ನು ಪರಸ್ಪರರ ಮೇಲೆ ಎಸೆಯುವ ವಿಚಾರವಾಗಿ ಘರ್ಷಣೆ ಬಳಿಕ ಎರಡು ಸಮುದಾಯಗಳ ಜನರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ.ಘಟನೆ ನಂತರ ಸ್ಥಳದಲ್ಲಿ ಭದ್ರತೆಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಅಧಿಕಾರಿ ಹೇಳಿದರು.

ಎರಡೂ ಸಮುದಾಯಗಳ ಶಂಕಿತರನ್ನು ಬಂಧಿಸಲಾಗುತ್ತಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com