ಖರ್ಗೆ ನೇತೃತ್ವದ ಸಿಇಸಿ ಸಭೆ
ದೇಶ
ಗುಜರಾತ್ ಚುನಾವಣೆ ಹಿನ್ನೆಲೆ ಖರ್ಗೆ ನೇತೃತ್ವದಲ್ಲಿ ಚುನಾವಣೆ ಸಮಿತಿ ಸಭೆ; ಅಭ್ಯರ್ಥಿಗಳ ಪಟ್ಟಿ ಅಂತಿಮದ ಬಗ್ಗೆ ಚರ್ಚೆ
ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಕಾರ್ಯಕಾರಿ ಸಮಿತಿಗೆ ಪರ್ಯಾಯವಾಗಿ ಸಮಿತಿ ರಚಿಸಿದ್ದು, ಈ ನಡುವೆ ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯನ್ನೂ ನಡೆಸಿದ್ದಾರೆ.
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಕಾರ್ಯಕಾರಿ ಸಮಿತಿಗೆ ಪರ್ಯಾಯವಾಗಿ ಸಮಿತಿ ರಚಿಸಿದ್ದು, ಈ ನಡುವೆ ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯನ್ನೂ ನಡೆಸಿದ್ದಾರೆ.
ಸಭೆಯಲ್ಲಿ, ಗುಜರಾತ್ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆ ಚರ್ಚೆ ನಡೆದಿದೆ. ಸಭೆಯಲ್ಲಿ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಸಹ ಭಾಗವಹಿಸಿದ್ದರು. ಗುಜರಾತ್ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿಯ ಮೂರು ಸಭೆಗಳು ನಡೆದಿವೆ.
ಗುಜರಾತ್ ನಲ್ಲಿ ಬಿಜೆಪಿಯ ಸರ್ಕಾರವನ್ನು ಕಿತ್ತೊಗೆದು ಈ ಬಾರಿ ಅಧಿಕಾರಕ್ಕೇರಲು ಕಾಂಗ್ರೆಸ್ ಯತ್ನಿಸುತ್ತಿದೆ. ಆದರೆ ಈ ಬಾರಿ ಕಾಂಗ್ರೆಸ್ ಗೆ ಆಮ್ ಆದ್ಮಿ ಪಕ್ಷ ಪ್ರಬಲ ಪೈಪೋಟಿ ನೀಡುವ ಸಾಧ್ಯತೆ ಇದೆ.
1998 ರಿಂದಲೂ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ವರ್ಷಾಂತ್ಯದ ವೇಳೆಗೆ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ