ಸಮಾಜದ ಸಕಾರಾತ್ಮಕ ಬೆಳವಣಿಗೆ: ಬಂಗಾಳಿಯರು ಗಂಡು ಮಗುವಿಗಿಂತ ಹೆಣ್ಣು ಮಗುವನ್ನೇ ದತ್ತು ಪಡೆಯಲು ಹೆಚ್ಚು ಆದ್ಯತೆ!

ಬಾಳಿನಲ್ಲಿ ಪುಟ್ಟ ಕಂದನ ಅಪೇಕ್ಷೆಯಲ್ಲಿದ್ದ ಪಶ್ಚಿಮ ಬಂಗಾಳದ ದಂಪತಿಗಳು ಕಳೆದ ನಾಲ್ಕು ವರ್ಷಗಳಲ್ಲಿ ಹೆಣ್ಣು ಮಗುವನ್ನು ಹೆಚ್ಚಾಗಿ ದತ್ತು ತೆಗೆದುಕೊಳ್ಳಲು ಆಸಕ್ತಿ ತೋರಿಸಿದ್ದಾರೆ.
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ
Updated on

ಕೋಲ್ಕತ್ತಾ: ಬಾಳಿನಲ್ಲಿ ಪುಟ್ಟ ಕಂದನ ಅಪೇಕ್ಷೆಯಲ್ಲಿದ್ದ ಪಶ್ಚಿಮ ಬಂಗಾಳದ ದಂಪತಿಗಳು ಕಳೆದ ನಾಲ್ಕು ವರ್ಷಗಳಲ್ಲಿ ಹೆಣ್ಣು ಮಗುವನ್ನು ಹೆಚ್ಚಾಗಿ ದತ್ತು ತೆಗೆದುಕೊಳ್ಳಲು ಆಸಕ್ತಿ ತೋರಿಸಿದ್ದಾರೆ.

ಸೆಂಟ್ರಲ್ ಅಡಾಪ್ಷನ್ ರಿಸೋರ್ಸ್ ಅಥಾರಿಟಿ (CARA) ನಲ್ಲಿ ಲಭ್ಯವಿರುವ ದಾಖಲೆಗಳ ಪ್ರಕಾರ, ಮಕ್ಕಳಿಲ್ಲದ ದಂಪತಿಗಳು, ಅವಿವಾಹಿತ ಪುರುಷರು ಅಥವಾ ಮಹಿಳೆಯರು, ವಿಧವೆಯರು, ವಿಚ್ಛೇದಿತರು ಮತ್ತು ವಿಧವೆಯರು ಗಂಡು ಮಗುವಿಗಿಂತ ಹೆಣ್ಣು ಮಗುವನ್ನು ದತ್ತು ತೆಗೆದುಕೊಳ್ಳಲು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಇದು ಸಮಾಜದಲ್ಲಿನ ಸಕಾರಾತ್ಮಕ ಬೆಳವಣಿಗೆ ಎಂದು ಸಮಾಜಶಾಸ್ತ್ರಜ್ಞರು ಹೇಳುತ್ತಾರೆ.

ಮಗುವನ್ನು ದತ್ತು ಪಡೆಯಲು, ಅರ್ಜಿದಾರರು CARA ವೆಬ್ ಸೈಟ್ ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಹೆಣ್ಣು ಮಗು ಅಥವಾ ಗಂಡು ಮಗುವನ್ನು ದತ್ತು ಪಡೆಯಬೇಕೆ ಎಂದು ನಮೂದಿಸಬೇಕು. CARA ವರದಿಯ ಪ್ರಕಾರ, ಕಳೆದ ನಾಲ್ಕು ವರ್ಷಗಳಲ್ಲಿ ಅರ್ಧಕ್ಕಿಂತ ಹೆಚ್ಚು ಅರ್ಜಿದಾರರು ಹೆಣ್ಣು ಮಗುವನ್ನು ದತ್ತು ತೆಗೆದುಕೊಳ್ಳಲು ಆಸಕ್ತಿ ತೋರಿಸಿದ್ದಾರೆ ಎಂದು ರಾಜ್ಯ ಸರ್ಕಾರದ ಮಹಿಳಾ, ಮಕ್ಕಳ ಅಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಹೇಳುತ್ತಾರೆ.

ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಬಳಿ ಲಭ್ಯವಿರುವ ದಾಖಲೆಗಳ ಪ್ರಕಾರ, 2018-19 ರಿಂದ ಒಟ್ಟು 855 ಮಕ್ಕಳನ್ನು ದತ್ತು ತೆಗೆದುಕೊಳ್ಳಲಾಗಿದೆ. ಅವರಲ್ಲಿ 512 ಹೆಣ್ಣು ಮಕ್ಕಳು. ನಿಯಮ ಪ್ರಕಾರ ಮಗುವನ್ನು ದತ್ತು ಪಡೆಯಲು ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು. ಸರ್ಕಾರದ ಪ್ರತಿನಿಧಿಗಳು ಅರ್ಜಿದಾರರ ಮನೆಗೆ ಭೇಟಿ ನೀಡಿ, ಕೌನ್ಸೆಲಿಂಗ್ ಸೆಷನ್‌ಗಳನ್ನು ನಡೆಸಿ, ಅರ್ಜಿದಾರರು ಮತ್ತು ದತ್ತು ಪಡೆಯುವ ಮಗುವಿನ ನಡುವೆ ಸಮಾಲೋಚನೆ ನಡೆಸಿದ ನಂತರ ಜಿಲ್ಲಾಧಿಕಾರಿಗಳು ಅಂತಿಮ ಒಪ್ಪಿಗೆ ನೀಡುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com