ಆತ್ಮಹತ್ಯೆ
ದೇಶ
ಮಥುರಾ ದೇವಾಲಯದ ಒಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಅರ್ಚಕನ ಶವ ಪತ್ತೆ!
ಮಥುರಾ ದೇವಾಲಯದ ಒಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಅರ್ಚಕರೊಬ್ಬರ ಶವ ಪತ್ತೆಯಾಗಿದೆ.
ಮಥುರಾ: ಮಥುರಾ ದೇವಾಲಯದ ಒಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಅರ್ಚಕರೊಬ್ಬರ ಶವ ಪತ್ತೆಯಾಗಿದೆ.
ಮೃತರನ್ನು ಚರಣ್ ದಾಸ್ ಎಂದು ಗುರುತಿಸಲಾಗಿದ್ದು, ಇಲ್ಲಿನ ಶಿವಮಂದಿರದ ಅರ್ಚಕರಾಗಿ ಇವರು ಸೇವೆ ಸಲ್ಲಿಸುತ್ತಿದ್ದರು.
ದೇವಾಲಯದ ಮೇಲ್ಛಾವಣಿಯ ಕೊಕ್ಕೆಗೆ ಅರ್ಚಕರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಸೌನ್ಕ್ ಪೊಲೀಸ್ ಔಟ್ ಪೋಸ್ಟ್ ನ ಉಸ್ತುವಾರು ಸಂದೀಪ್ ಕುಮಾರ್ ಹೇಳಿದ್ದಾರೆ.
ಸ್ಥಳೀಯರು ಅರ್ಚಕರ ಶವ ಕಂಡು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಪ್ರಕರಣ ಎಂಬಂತೆ ತೋರುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ