ದೇಶ

ಗುಜರಾತ್ ಮಾಜಿ ಸಿಎಂ ಶಂಕರ್ ಸಿಂಗ್ ವಘೇಲಾ ಪುತ್ರ ಕಾಂಗ್ರೆಸ್ ಸೇರ್ಪಡೆ

ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರ ಪುತ್ರ ಮಹೇಂದ್ರ ಸಿಂಗ್ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಗುಜರಾತ್ ಮಾಜಿ ಸಿಎಂ ಶಂಕರ್ ಸಿಂಗ್ ವಘೇಲಾ ಪುತ್ರ ಕಾಂಗ್ರೆಸ್ ಸೇರ್ಪಡೆ
ಶಂಕರ್ ಸಿಂಗ್ ವಘೇಲಾ ಪುತ್ರ ಕಾಂಗ್ರೆಸ್ ಸೇರ್ಪಡೆ
Published On :

ಗಾಂಧಿನಗರ: ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರ ಪುತ್ರ ಮಹೇಂದ್ರ ಸಿಂಗ್ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಶಂಕರ್ ಸಿಂಗ್ ವಘೇಲಾ ಅವರು ಕಳೆದ ಆಗಸ್ಟ್‌ನಲ್ಲಿ ಪ್ರಜಾ ಶಕ್ತಿ ಡೆಮಾಕ್ರಟಿಕ್ ಪಾರ್ಟಿ ಎಂಬ ಹೊಸ ಪಕ್ಷವನ್ನು ಸ್ಥಾಪಿಸಿದ್ದು, ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಈ ಹಿಂದೆ ಗುಜರಾತ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ವಘೇಲಾ ಅವರು ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ನಂತರ ಏಳು ಶಾಸಕರೊಂದಿಗೆ ಅವರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.