ತೆಲಂಗಾಣ: ಮೂರನೇ ದಿನಕ್ಕೆ ಕಾಲಿಟ್ಟ ರಾಹುಲ್ ಭಾರತ್ ಜೋಡೋ ಯಾತ್ರೆ

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ನಾರಾಯಣಪೇಟೆ ಜಿಲ್ಲೆಯ ಏಳಿಗಂದಲದಿಂದ ಆರಂಭವಾಯಿತು.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ
Updated on

ಹೈದ್ರಾಬಾದ್: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ನಾರಾಯಣಪೇಟೆ ಜಿಲ್ಲೆಯ ಏಳಿಗಂದಲದಿಂದ ಆರಂಭವಾಯಿತು. ಇದು 23.3 ಕಿಲೋ ಮೀಟರ್ ದೂರ ಕ್ರಮಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮೆಹಬೂಬ ನಗರದಲ್ಲಿ ರಾತ್ರಿ ಯಾತ್ರೆಗೆ ವಿರಾಮ ನೀಡಲಾಗುತ್ತದೆ.

ಬೆಳಗ್ಗೆ 6-10ರ ಸುಮಾರಿನಲ್ಲಿ ಆರಂಭವಾದ ಯಾತ್ರೆಯಲ್ಲಿ ಕೇಂದ್ರದ ಮಾಜಿ ಸಚಿವ ಜೈರಾಮ್ ರಮೇಶ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಎ. ರೇವಂತ್ ರೆಡ್ಡಿ ಮತ್ತು ನೂರಾರು ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ರಾಹುಲ್ ಗಾಂಧಿ ಹೆಜ್ಜೆ ಹಾಕಿದರು.

ಯಾತ್ರೆ ವೇಳೆ ರಸ್ತೆ ಬದಿಯಲ್ಲಿ ತನಗಾಗಿ ಕಾಯುತ್ತಿದ್ದ ಇಬ್ಬರು ಶಾಲಾ ವಿದ್ಯಾರ್ಥಿನಿಯರನ್ನು ಕರೆದ ರಾಹುಲ್ ಗಾಂಧಿ, ಅವರೊಂದಿಗೆ ಸ್ವಲ್ಪ ದೂರ ನಡೆದರು. ಗುರುವಾರ ಮಕ್ತಲ್ ನ ಶ್ರೀ ಬಾಲಾಜಿ ಫ್ಯಾಕ್ಟರಿಯಲ್ಲಿ ಯಾತ್ರೆ ವಿರಾಮ ಪಡೆಯುನ ಮುನ್ನ 26.7 ಕಿ. ಮೀ ನಡೆಯಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಯಾತ್ರೆಯು ನವೆಂಬರ್ 7 ರಂದು ಮಹಾರಾಷ್ಟ್ರ ಪ್ರವೇಶಿಸುವ ಮೊದಲು ತೆಲಂಗಾಣದ 19 ವಿಧಾನಸಭಾ ಕ್ಷೇತ್ರ, 7 ಲೋಕಸಭಾ ಕ್ಷೇತ್ರ ಸೇರಿದಂತೆ ಒಟ್ಟಾರೇ 375 ಕಿ.ಮಿ.ನಷ್ಟು ದೂರ ಯಾತ್ರೆ  ಸಾಗಲಿದೆ. ನವೆಂಬರ್ 4 ರಂದು ಒಂದು ದಿನದ ವಿರಾಮ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com