ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಅಪ್ಪು ನೆನೆದ ಕೇಜ್ರಿವಾಲ್

ಪವರ್‌ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ‘ಅಪ್ಪು‘ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
ದೆಹಲಿ ಸಿಎಂ ಕೇಜ್ರಿವಾಲ್
ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ: ಪವರ್‌ಸ್ಟಾರ್‌ ಪುನೀತ್ ರಾಜ್‌ಕುಮಾರ್‌ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರು ‘ಅಪ್ಪು‘ ನೆನೆದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ, ಈ ದಿನ ಅವರನ್ನು ನಾನು ಗಾಢವಾಗಿ ನೆನಪಿಸಿಕೊಳ್ಳುತ್ತಿದ್ದೇನೆ. ಸಿನಿಮಾ, ಹಾಡುಗಳು, ಸಾಮಾಜಿಕ ಕಾರ್ಯಗಳ ಮೂಲಕ ಪುನೀತ್ ಈಗಲೂ ನಮ್ಮ ಬಳಿಯೇ ಇದ್ದಾರೆ. ಅವರು ನಮ್ಮಿಂದ ದೂರವಾಗಿಲ್ಲ. ಪುನೀತ್‌ ಎಂದೆಂದಿಗೂ ಕರುನಾಡಿನ ಪವರ್ ಸ್ಟಾರ್ ಎಂದು ಹೇಳಿದ್ದಾರೆ. 

ಪುನೀತ್ ರಾಜ್ ಕುಮಾರ್ ಅವರ ಮೊದಲ ಪುಣ್ಯಸ್ಮರಣೆ ಸಂದರ್ಭದಲ್ಲೇ ರಾಜ್ಯ ಸರ್ಕಾರ ಅಪ್ಪು ಅವರಿಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿದ್ದು, ಕಾರ್ಯಕ್ರಮದಲ್ಲಿ ದಕ್ಷಿಣದ ಇಬ್ಬರು ಸ್ಟಾರ್ ನಟರು ಅತಿಥಿಗಳಾಗಿ ಆಗಮಿಸಲಿದ್ದಾರೆಂದು ತಿಳಿದುಬಂದಿದೆ.

ಕಾರ್ಯಕ್ರವನ್ನು ನವೆಂಬರ್ 1 ರಂದು ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಲಾಗಿದ್ದು, ಡಾ.ರಾಜ್ ಕುಟುಂಬ ಹಾಗೂ ಅಭಿಮಾನಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com