ರೇಪ್ ಆಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ 12 ವರ್ಷದ ಬಾಲಕಿಯ ವೀಡಿಯೋ ಮಾಡಿದ್ದ 20 ಜನರ ವಿರುದ್ಧ ಪ್ರಕರಣ ದಾಖಲು

ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಗುರ್ಸಹೈಗಂಜ್‌ನಲ್ಲಿರುವ ಸರ್ಕಾರಿ ಅತಿಥಿ ಗೃಹ ಸಂಕೀರ್ಣದಲ್ಲಿ ರಕ್ತಸ್ರಾವ ಮತ್ತು ನೋವಿನಿಂದ ನರಳುತ್ತಿದ್ದ 12 ವರ್ಷದ ಬಾಲಕಿಗೆ ಸಹಾಯ ಮಾಡುವ ಬದಲು, ಆಕೆಯ ವಿಡಿಯೋ ರೆಕಾರ್ಡ್ ಮಾಡಿದ್ದಕ್ಕಾಗಿ ಪೊಲೀಸರು 20 ಮಂದಿ ಅಪರಿಚಿತರನ್ನು ಬಂಧಿಸಿದ್ದಾರೆ.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ
Updated on

ಕನೌಜ್: ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಗುರ್ಸಹೈಗಂಜ್‌ನಲ್ಲಿರುವ ಸರ್ಕಾರಿ ಅತಿಥಿ ಗೃಹ ಸಂಕೀರ್ಣದಲ್ಲಿ ರಕ್ತಸ್ರಾವ ಮತ್ತು ನೋವಿನಿಂದ ನರಳುತ್ತಿದ್ದ 12 ವರ್ಷದ ಬಾಲಕಿಗೆ ಸಹಾಯ ಮಾಡುವ ಬದಲು, ಆಕೆಯ ವಿಡಿಯೋ ರೆಕಾರ್ಡ್ ಮಾಡಿದ್ದಕ್ಕಾಗಿ ಪೊಲೀಸರು 20 ಮಂದಿ ಅಪರಿಚಿತರನ್ನು ಬಂಧಿಸಿದ್ದಾರೆ.

ಬಂಧಿತರ ಮೊಬೈಲ್ ಫೋನ್ ಮೇಲೆ ಪ್ರಕರಣ ದಾಖಲಿಸಲಾಗಿದೆ ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ವೀಡಿಯೊ ವೈರಲ್ ಆಗಿರುವುದರಿಂದ ಸಂತ್ರಸ್ತ ಅಪ್ರಾಪ್ತ ಬಾಲಕಿಯ ಗುರುತು ಬಹಿರಂವಾಗಿದೆ. ಹೀಗಾಗಿ 20 ಅಪರಿಚಿತ ವ್ಯಕ್ತಿಗಳನ್ನು ಪೋಕ್ಸೊ ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಬಂಧಿಸಲಾಗಿದೆ ಎಂದು ಗುರ್ಸಹೈಗಂಜ್ ಎಸ್‌ಎಚ್‌ಒ ರಾಜ್‌ಕುಮಾರ್ ಸಿಂಗ್ ಹೇಳಿದ್ದಾರೆ. 

ಪೊಲೀಸರ ಪ್ರಕಾರ, ಘಟನಾ ಸ್ಥಳಕ್ಕೆ ತಲುಪಿದ್ದ ಪೊಲೀಸ್ ಔಟ್‌ಪೋಸ್ಟ್ ಇನ್‌ಚಾರ್ಜ್ ಮನೋಜ್ ಪಾಂಡೆ ಅವರು ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದ ಬಾಲಕಿಯನ್ನು ನೋಡಿದ್ದಾರೆ. ಈ ವೇಳೆ ಅಲ್ಲಿ ನೆರೆದಿದ್ದ ಜನರನ್ನು ವೀಡಿಯೊ ಮಾಡದಂತೆ ಸೂಚಿಸಿದ್ದಾರೆ ಆದರೆ ಅವರು ವೀಡಿಯೊ ಮಾಡಿದ್ದಾರೆ ಎಂದು ಎನ್ನಲಾಗಿದೆ.

ಅಕ್ಟೋಬರ್ 23ರಂದು ಅತಿಥಿಗೃಹದ ಸೆಕ್ಯುರಿಟಿ ಗಾರ್ಡ್, ಬಾಲಕಿ ತೀವ್ರ ರಕ್ತಸ್ರಾವದಿಂದ ನೋವಿನಿಂದ ನರಳುತ್ತಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ವೈರಲ್ ಆಗಿರುವ ವಿಡಿಯೋದಲ್ಲಿ, ಓರ್ವ ಪೊಲೀಸ್ ಗಾಯಾಳು ಹುಡುಗಿಯನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು ಕಾಣಬಹುದಾಗಿದೆ. ಆದರೆ ಹತ್ತಿರದ ಜನರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ವೀಡಿಯೊವನ್ನು ರೆಕಾರ್ಡ್ ಮಾಡುತ್ತಿದ್ದಾರೆ. ವಿಡಿಯೋ ಚಿತ್ರೀಕರಿಸುತ್ತಿರುವುದನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಕಾನ್ಪುರದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು(ರಾಮ್‌ಜಿ ವರ್ಮಾ, ಫರೂಕಾಬಾದ್ ನಿವಾಸಿ) ಪೊಲೀಸರು ಇನ್ನೂ ಬಂಧಿಸಿಲ್ಲ. ಬಾಲಕಿಯ ಚಿಕ್ಕಪ್ಪನ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಮತ್ತು 307 (ಕೊಲೆಗೆ ಯತ್ನ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿ ಹುಂಡಿ ಖರೀದಿಸಲು ಭಾನುವಾರ ಹೊರಗೆ ಹೋಗಿದ್ದಳು ಆದರೆ ಮನೆಗೆ ಹಿಂತಿರುಗಲಿಲ್ಲ, ಆಕೆಯ ಕುಟುಂಬ ಸದಸ್ಯರು ಅವಳನ್ನು ಹುಡುಕಲು ಪ್ರಾರಂಭಿಸಿದರು. ಪೊಲೀಸರ ಪ್ರಕಾರ, ಅತಿಥಿಗೃಹದ ಸಿಸಿಟಿವಿ ದೃಶ್ಯಗಳಲ್ಲಿ, ಅಪ್ರಾಪ್ತ ವಯಸ್ಕ ಯುವಕನೊಂದಿಗೆ ಮಾತನಾಡುತ್ತಿರುವುದು ಕಂಡುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com