ಗುಜರಾತ್‌ನಲ್ಲಿ ಕೇಬಲ್ ಸೇತುವೆ ದುರಂತ: 30 ಮಕ್ಕಳು ಸೇರಿ 80 ಮಂದಿ ಸಾವು: ಮೃತರ ಕುಟುಂಬಕ್ಕೆ 6 ಲಕ್ಷ ಪರಿಹಾರ ಘೋಷಣೆ
ಗುಜರಾತ್‌ನ ಮೊರ್ಬಿಯ ಮಚ್ಚು ನದಿ ಮೇಲೆ ನಿರ್ಮಿಸಲಾಗಿದ್ದ ಕೇಬಲ್ ಸೇತುವೆ ಮುರಿದು ಬಿದ್ದಿದ್ದು ಹಲವರು ನೂರಾರು ಮಂದಿ ನದಿಗೆ ಬಿದ್ದಿದ್ದಾರೆ. ಇನ್ನು 80 ಮಂದಿ ಸಾವನ್ನಪ್ಪಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ. ಇದೆ.
ನೂರಾರು ಜನರು ಸೇತುವೆ ಮೇಲೆ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇಲ್ಲಿಯವರೆಗೂ 30 ಮಕ್ಕಳ ಸೇರಿದಂತೆ 80 ಮಂದಿ ಸಾವನ್ನಪ್ಪಿದ್ದಾರೆ.
ಮೋರ್ಬಿಯಲ್ಲಿ ಸಂಭವಿಸಿದ ದುರ್ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮತ್ತು ಇತರ ಅಧಿಕಾರಿಗಳೊಂದಿಗೆ ಮಾತನಾಡಿದರು. ರಕ್ಷಣಾ ಕಾರ್ಯಾಚರಣೆಗಾಗಿ ತಂಡಗಳ ತುರ್ತು ಸಜ್ಜುಗೊಳಿಸುವಂತೆ ಅವರು ಕೋರಿದ್ದಾರೆ. ಪರಿಸ್ಥಿತಿಯನ್ನು ನಿಕಟವಾಗಿ ಮತ್ತು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಪೀಡಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಅವರು ಕೇಳಿಕೊಂಡಿದ್ದಾರೆ.
ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ್ದಾರೆ. ಇನ್ನು ಗುಜರಾತ್ ಸಿಎಂ ಭುಪೇಂದ್ರ ಪಾಟೀಲ್ ಮೃತರ ಕುಟುಂಬಕ್ಕೆ 4 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಮೋರ್ಬಿಯಲ್ಲಿ ತೂಗುಸೇತುವೆ ಕುಸಿತದ ದುರಂತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಗಾಯಗೊಂಡವರಿಗೆ ತಕ್ಷಣದ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚನೆಗಳನ್ನು ನೀಡಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ