ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದಿ ವೈರ್ ಸಂಸ್ಥಾಪಕ ಸಿದ್ಧಾರ್ಥ್ ವರದರಾಜನ್, ಮೈಕ್ ವೇಣು ನಿವಾಸದ ಮೇಲೆ ದೆಹಲಿ ಪೊಲೀಸ್ ದಾಳಿ

ವೈರ್ ಸಂಸ್ಥಾಪಕ ಸಿದ್ಧಾರ್ಥ್ ವರದರಾಜನ್ ಮತ್ತು ಸಂಪಾದಕ ಎಂಕೆ ವೇಣು ಅವರ ಮನೆಗಳ ಮೇಲೆ ದೆಹಲಿ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿದ್ದಾರೆ.
Published on

ನವದೆಹಲಿ: ವೈರ್ ಸಂಸ್ಥಾಪಕ ಸಿದ್ಧಾರ್ಥ್ ವರದರಾಜನ್ ಮತ್ತು ಸಂಪಾದಕ ಎಂಕೆ ವೇಣು ಅವರ ಮನೆಗಳ ಮೇಲೆ ದೆಹಲಿ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿದ್ದಾರೆ.

ಯಾರನ್ನೂ ಬಂಧಿಸಿಲ್ಲ ಅಥವಾ ವಶಕ್ಕೆ ಪಡೆದಿಲ್ಲ ಎಂದು ಹೇಳಿರುವ ಪೊಲೀಸರು, ಪ್ರಸ್ತುತ 'ದಿ ವೈರ್' ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಸಾಕ್ಷ್ಯವನ್ನು ಸಂಗ್ರಹಿಸುವ ಸಲುವಾಗಿ ಜೋಡಿ ಎಲೆಕ್ಟ್ರಾನಿಕ್ ಸಾಧನಗಳನ್ನು ಶೋಧಿಸುತ್ತಿರುವುದಾಗಿ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯಾ ಅವರ ದೂರಿನ ಆಧಾರದ ಮೇಲೆ 'ದಿ ವೈರ್' ಮತ್ತು ಅದರ ಸಂಪಾದಕರ ವಿರುದ್ಧ ಕಳೆದ ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ. 

"ವಂಚನೆ ಮತ್ತು ಫೋರ್ಜರಿ" ಹಾಗೂ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಅಮಿತ್ ಮಾಳವೀಯಾ ದೂರು ನೀಡಿದ್ದರು.

ಮಾಳವೀಯ ಅವರು ಸಾಮಾಜಿಕ ಮಾಧ್ಯಮ ಸಂಸ್ಥೆ ಮೆಟಾದಲ್ಲಿ(ಫೇಸ್‌ಬುಕ್‌ ಮಾತೃಸಂಸ್ಥೆ) ತಮ್ಮ ವಿಶೇಷ ಅಧಿಕಾರ ಬಳಸಿಕೊಂಡು 700 ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಿದ್ದಾರೆ ಎಂಬ ವರದಿಗೆ ಸಂಬಂಧಿಸಿದಂತೆ ದಿ ವೈರ್ ಮತ್ತು ಅದರ ಸಂಸ್ಥಾಪಕ, ಸಂಪಾದಕರ ವಿರುದ್ಧ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com