ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ಯಾತ್ರಾರ್ಥಿಗಳಿಗೆ ಕಾರು ಡಿಕ್ಕಿ; 7 ಮಂದಿ ದುರ್ಮರಣ!

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು 7 ಮಂದಿ ದುರ್ಮರಣ ಹೊಂದಿದ್ದಾರೆ. 
ಅಪಘಾತ ದೃಶ್ಯ
ಅಪಘಾತ ದೃಶ್ಯ

ಮುಂಬೈ: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು 7 ಮಂದಿ ದುರ್ಮರಣ ಹೊಂದಿದ್ದಾರೆ. 

ಸೊಲ್ಲಾಪುರ ಜಿಲ್ಲೆಯ ಸಂಗೋಲೆ ಪಟ್ಟಣದ ಬಳಿ ಈ ಅಪಘಾತ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕೊಲ್ಹಾಪುರ ಜಿಲ್ಲೆಯ ಜಥರ್ವಾಡಿಯಿಂದ ಪಂಢರಪುರಕ್ಕೆ 32 ಯಾತ್ರಾರ್ಥಿಗಳ ತಂಡವು ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಪರಿಚಿತ ವಾಹನವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಅಪಘಾತಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಂತಾಪ ಸೂಚಿಸಿದ್ದು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com