ಸಿಧು ಮೂಸೆವಾಲಾ
ಸಿಧು ಮೂಸೆವಾಲಾ

ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಸಿಧು ಹತ್ಯೆಯ ಮಾಸ್ಟರ್ ಮೈಂಡ್: ಪಂಜಾಬ್ ಪೊಲೀಸ್ ಚಾರ್ಜ್ ಶೀಟ್

ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಕೆನಡಾ ಮೂಲದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಎಂದು ಚಾರ್ಜ್‌ಶೀಟ್‌ನಲ್ಲಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

ಚಂಡೀಗಢ: ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಕೆನಡಾ ಮೂಲದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಎಂದು ಚಾರ್ಜ್‌ಶೀಟ್‌ನಲ್ಲಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ.

ಇದೇ ವರ್ಷದ ಆರಂಭದಲ್ಲಿ ಹತ್ಯೆಯನ್ನು ಕಾರ್ಯಗತಗೊಳಿಸಲು ಗ್ಯಾಂಗ್ ಸ್ಟರ್ ​​ಲಾರೆನ್ಸ್ ಬಿಷ್ಣೋಯ್ ಮತ್ತು ಜಗ್ಗು ಭಗವಾನ್‌ಪುರಿಯಾ ಮತ್ತು ಇತರ ಕೆಲವರೊಂದಿಗೆ ಸಮನ್ವಯ ಸಾಧಿಸಿದ್ದರು ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ನಮೂದಿಸಲಾಗಿದೆ.

ಕಳೆದ ಮೇ 29ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸೆವಾಲಾ ಎಂದೇ ಖ್ಯಾತರಾಗಿದ್ದ ಶುಭದೀಪ್ ಸಿಂಗ್ ಸಿಧು ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ತನ್ನ ಸ್ನೇಹಿತ ಮತ್ತು ಸೋದರಸಂಬಂಧಿಯೊಂದಿಗೆ ಮಾನ್ಸಾದ ಜವಾಹರ್ ಕೆ ಗ್ರಾಮಕ್ಕೆ ಜೀಪಿನಲ್ಲಿ ಪ್ರಯಾಣಿಸುತ್ತಿದ್ದಾಗ ಆರು ಶೂಟರ್‌ಗಳು ಸಿಧು ಮೇಲೆ ಗುಂಡಿನ ದಾಳಿ ನಡೆಸಿದ್ದರು.

ಪಂಜಾಬ್ ಪೊಲೀಸರು ಆಗಸ್ಟ್ 26ರಂದು 24 ಆರೋಪಿಗಳ ವಿರುದ್ಧ 1,850 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು. 302 (ಕೊಲೆ), 307, 341, 326 ಮತ್ತು 148 ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಪೊಲೀಸರು 36 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಆದರೆ ಲಾರೆನ್ಸ್ ಬಿಷ್ಣೋಯ್, ಜಗ್ಗು ಭಗವಾನ್‌ಪುರಿಯಾ ಮತ್ತು ಗೋಲ್ಡಿ ಬ್ರಾರ್ ಸೇರಿದಂತೆ 24 ಜನರ ವಿರುದ್ಧ ಮಾತ್ರ ಚಾರ್ಜ್‌ಶೀಟ್ ದಾಖಲಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com