ಕೋವಿಡ್-19: ಕಳೆದ 24 ಗಂಟೆಗಳಲ್ಲಿ 7,946 ಹೊಸ ಪ್ರಕರಣ, ಕೇರಳದಲ್ಲಿ 12 ಸೇರಿ 37 ಜನರು ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,946 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4,44,36,339 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,946 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4,44,36,339 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳವೊಂದರಲ್ಲೇ 12 ಜನರು ಸೇರಿದಂತೆ ಒಟ್ಟು 37 ಜನರು ಸಾವಿಗೀಡಾಗಿದ್ದು, ಈವರೆಗೆ 5,27,911 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.14ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರವು ಶೇ 98.67ರಷ್ಟಿದೆ. ಸದ್ಯ ದೇಶದಲ್ಲಿ 59,210 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com