ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರತೆ ಎಂದಿದ್ದ 'ಸುಪ್ರೀಂ' ಮಾಜಿ ನ್ಯಾಯಾಧೀಶರನ್ನು ತರಾಟೆಗೆ ತೆಗೆದುಕೊಂಡ ಕಿರಣ್ ರಿಜಿಜು

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಬಿ.ಎನ್. ಶ್ರೀಕೃಷ್ಣ ಅವರು ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರತೆ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾನೂನು ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ.
ಕಿರಣ್ ರಿಜಿಜು
ಕಿರಣ್ ರಿಜಿಜು

ನವದೆಹಲಿ: ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಬಿ.ಎನ್. ಶ್ರೀಕೃಷ್ಣ ಅವರು ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರತೆ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಕಾನೂನು ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದು, ಜನಸಾಮಾನ್ಯರಿಂದ ಆಯ್ಕೆಯಾದ ಪ್ರಧಾನಿಯನ್ನು ನಿಂದಿಸಲು ನಿರ್ಬಂಧವಿಲ್ಲದೆ ಮಾತನಾಡುವವರು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಅಳುತ್ತಿದ್ದಾರೆ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ಶ್ರೀಕೃಷ್ಣ (ನಿವೃತ್ತ) ಅವರು ರಾಷ್ಟ್ರೀಯ ದಿನಪತ್ರಿಕೆಗೆ ನೀಡಿದ ಸಂದರ್ಶನದ ಭಾಗವನ್ನು ಉಲ್ಲೇಖಿಸಿದ ಟ್ವೀಟ್‌ಗೆ ಪ್ರತಿಕ್ರಿಯಿಸಿದ ರಿಜಿಜು, 'ಜನಸಾಮಾನ್ಯರಿಂದ ಆಯ್ಕೆಯಾದ ಪ್ರಧಾನಿಯನ್ನು ನಿಂದಿಸಲು ಯಾವುದೇ ನಿರ್ಬಂಧಗಳಿಲ್ಲದೆ ನಿರಂತರವಾಗಿ ಮಾತನಾಡುವವರು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಅಳುತ್ತಿದ್ದಾರೆ. ಕಾಂಗ್ರೆಸ್ ಹೇರಿದ್ದ ತುರ್ತುಪರಿಸ್ಥಿತಿ ಬಗ್ಗೆ ಅವರು ಎಂದಿಗೂ ಮಾತನಾಡುವುದಿಲ್ಲ ಮತ್ತು ಕೆಲವು ಪ್ರಾದೇಶಿಕ ಪಕ್ಷದ ಸಿಎಂಗಳನ್ನು ಟೀಕಿಸುವ ಧೈರ್ಯವನ್ನೂ ಮಾಡುವುದಿಲ್ಲ' ಎಂದು ಕಿಡಿಕಾರಿದ್ದಾರೆ.

'ಇಂದು ಪರಿಸ್ಥಿತಿಗಳು ತುಂಬಾ ಕೆಟ್ಟದಾಗಿವೆ ಎಂದು ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರು ಹೇಳಿದ್ದರು.

'ನಾನು ಸಾರ್ವಜನಿಕನ ಸ್ಥಾನದಲ್ಲಿ ನಿಂತು ಪ್ರಧಾನಿಯ ಮುಖವನ್ನು ಇಷ್ಟಪಡುವುದಿಲ್ಲ ಎಂದು ಹೇಳಿದರೆ, ಯಾರಾದರೂ ನನ್ನ ಮೇಲೆ ದಾಳಿ ಮಾಡಬಹುದು, ನನ್ನನ್ನು ಬಂಧಿಸಬಹುದು, ಯಾವುದೇ ಕಾರಣ ನೀಡದೆ ಜೈಲಿಗೆ ಹಾಕಬಹುದು. ಈಗ ಏನಾಗಿದೆಯೋ ಅದನ್ನು ನಾಗರಿಕರಾಗಿ ನಾವೆಲ್ಲರೂ ವಿರೋಧಿಸುತ್ತೇವೆ' ಎಂದು ಮಾಜಿ ನ್ಯಾಯಾಧೀಶರು ಹೇಳಿದ್ದರು.

ಶನಿವಾರ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು ಇದನ್ನು ನಿಜವಾಗಿಯೂ ಹೇಳಿದ್ದಾರೆಯೇ ಎಂಬುದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

'ಇದು ನಿಜವಾಗಿದ್ದರೆ, ಅವರು ನೀಡಿರುವ ಹೇಳಿಕೆಯು ಅವರು ಸೇವೆ ಸಲ್ಲಿಸಿದ ಸಂಸ್ಥೆಯನ್ನೇ ಅವಮಾನಿಸುವಂತಿದೆ' ಎಂದು ಯಾರನ್ನೂ ಹೆಸರಿಸದೆ ಸಚಿವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com