ಚಂಡೀಗಢ: ಪಂಜಾಬ್ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಬಲವೀರ್ ರಾಣಿ ಸೋಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಸೋಮವಾರ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.
ಕೌಟುಂಬಿಕ ಕಾರಣದಿಂದಾಗಿ ಹುದ್ದೆಯಲ್ಲಿ ಮುಂದುವರೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಆ ಹುದ್ದೆಯಿಂದ ತೆರವುಗೊಳಿಸುವಂತೆ ಸೋಧಿ ಪತ್ರದಲ್ಲಿ ಬರೆದಿದ್ದಾರೆ. ಆದರೆ, ಅವರು ಪಕ್ಷಕ್ಕೆ ನಿಷ್ಠರಾಗಿರುತ್ತಾರೆ ಎಂದು ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದಾರೆ. ಪತ್ರದ ಪ್ರತಿಯನ್ನು ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷೆ ನೀತಾ ಡಿಸೋಜಾ ಅವರಿಗೂ ಕಳುಹಿಸಲಾಗಿದೆ.
ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಆರಂಭಕ್ಕೂ ಮುನ್ನಾ ಅವರು ರಾಜೀನಾಮೆ ನೀಡಿದ್ದಾರೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರೊಂದಿಗೆ ಯಾವುದೇ ಯಾವುದೇ ಭಿನ್ನಾಭಿಪ್ರಾಯವಿಲ್ಲ ಮತ್ತು ಕೌಟುಂಬಿಕ ಕಾರಣದಿಂದ ರಾಜೀನಾಮೆ ನೀಡಿದ್ದೇನೆ ಎಂದು ಸೋಧಿ ತಿಳಿಸಿದ್ದಾರೆ.
Advertisement