ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನಾವು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿರುವುದಕ್ಕೆ ಹೆಮ್ಮೆ ಪಡಬೇಕು: ಪ್ರಧಾನಿ ಮೋದಿ

ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವುದು ಸಾಮಾನ್ಯ ಸಾಧನೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ಸೂರತ್: ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿರುವುದು ಸಾಮಾನ್ಯ ಸಾಧನೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಗುಜರಾತ್‌ನ ಸೂರತ್ ನ ಓಲ್ಪಾಡ್ ಪ್ರದೇಶದಲ್ಲಿ ಆಯೋಜಿಸಲಾದ ಮೆಗಾ ವೈದ್ಯಕೀಯ ಶಿಬಿರದಲ್ಲಿ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ, ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಈ ಸಾಧನೆಯು ಅಮೃತ ಕಾಲದಲ್ಲಿ ಮತ್ತಷ್ಟು ಸಾಧನೆ ಮಾಡಲು ಮತ್ತು ದೊಡ್ಡ ಗುರಿಗಳನ್ನು ಸಾಧಿಸಲು ನಮಗೆ ಆತ್ಮ ವಿಶ್ವಾಸ ನೀಡಿದೆ ಎಂದರು.

ಈ ಪ್ರಗತಿಯು ಸಾಮಾನ್ಯವಲ್ಲ. ಈ ಸಾಧನೆ ಬಗ್ಗೆ ಪ್ರತಿಯೊಬ್ಬ ಭಾರತೀಯರು ಹೆಮ್ಮೆ ಪಡಬೇಕು ಮತ್ತು ಈ ಉತ್ಸಾಹವನ್ನು ನಾವು ಉಳಿಸಿಕೊಳ್ಳಬೇಕಾಗಿದೆ ಎಂದು ಅವರು ತಿಳಿಸಿದರು. 

ರೈತರು ನೈಸರ್ಗಿಕ ಕೃಷಿ ವಿಧಾನವನ್ನು ಅಳವಡಿಸಿಕೊಳ್ಳುವಂತೆ ಮನವಿ ಮಾಡಿದರು. ಇದರಿಂದ ಕನಿಷ್ಠ ವೆಚ್ಚದಲ್ಲಿ ಉತ್ತಮ ಇಳುವರಿ ದೊರೆಯುತ್ತದೆ ಎಂದರು. ಕೇಂದ್ರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಉಲ್ಲೇಖಿಸಿದ ಮೋದಿ, "ಕಳೆದ 8 ವರ್ಷಗಳಲ್ಲಿ ಬಡವರಿಗಾಗಿ ದೇಶಾದ್ಯಂತ ಸರ್ಕಾರ ಮೂರು ಕೋಟಿ ಮನೆಗಳನ್ನು ನಿರ್ಮಿಸಿದೆ. ಇವುಗಳಲ್ಲಿ ಸುಮಾರು 10 ಲಕ್ಷ ಮನೆಗಳನ್ನು ಗುಜರಾತ್ ಒಂದರಲ್ಲೇ ನಿರ್ಮಿಸಲಾಗಿದೆ ಎಂದು ಹೇಳಿದರು.

ಗುಜರಾತ್‌ನಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಶ್ಲಾಘಿಸಿದ ಮೋದಿ, ರಾಜ್ಯವು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳ ದೃಢವಾದ ಜಾಲವನ್ನು ಹೊಂದಿದೆ. ಕಳೆದ ಎರಡು ದಶಕಗಳಲ್ಲಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ 11 ರಿಂದ 31 ಕ್ಕೆ ಏರಿದೆ. ರಾಜ್ ಕೋಟ್ ನಲ್ಲಿ ಏಮ್ಸ್ ಸ್ಥಾಪನೆಯಾಗಲಿದೆ ಬರಲಿದೆ ರಾಜ್ಯಕ್ಕೆ ಹಲವಾರು ಹೊಸ ವೈದ್ಯಕೀಯ ಕಾಲೇಜುಗಳನ್ನು ಸಹ ಪ್ರಸ್ತಾಪಿಸಲಾಗಿದೆ ಎಂದು ಅವರು ಹೇಳಿದರು. 

Related Stories

No stories found.

Advertisement

X
Kannada Prabha
www.kannadaprabha.com