ಬ್ರಿಟನ್ ಪ್ರಧಾನಿ ಟ್ರಸ್ ಜೊತೆ ಪ್ರಧಾನಿ ಮೋದಿ ದೂರವಾಣಿ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸುವಲ್ಲಿ ಅವರ ಪಾತ್ರವನ್ನು ಶ್ಲಾಘಿಸಿದ್ದಾರೆ.
ಪ್ರಧಾನಿ ಮೋದಿ, ಲಿಜ್ ಟ್ರಸ್
ಪ್ರಧಾನಿ ಮೋದಿ, ಲಿಜ್ ಟ್ರಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸುವಲ್ಲಿ ಅವರ ಪಾತ್ರವನ್ನು ಶ್ಲಾಘಿಸಿದ್ದಾರೆ.

ಸದ್ಯ ನಡೆಯುತ್ತಿರುವ ಎಫ್‌ಟಿಎ ಮಾತುಕತೆಗಳು, ರಕ್ಷಣೆ ಮತ್ತು ಭದ್ರತಾ ಸಹಕಾರ ಮತ್ತು ಎರಡೂ ದೇಶಗಳ ನಡುವಿನ ಜನರ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಉಭಯ ನಾಯಕರು ಚರ್ಚಿಸಿದರು" ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯೊಂದು ತಿಳಿಸಿದೆ. 

ರಾಣಿ ಎಲಿಜಬೆತ್ II ರ ನಿಧನದ ಹಿನ್ನೆಲೆಯಲ್ಲಿ ರಾಜಮನೆತನ ಮತ್ತು ಯುಕೆ ಜನತೆಗೆ ಪ್ರಧಾನ ಮಂತ್ರಿ ತೀವ್ರ ಸಂತಾಪ ಸೂಚಿಸಿದ್ದಾರೆ. ಟ್ರಸ್ ಅವರು ಮಂಗಳವಾರ ಬ್ರಿಟನ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಟ್ರಸ್ ಅವರೊಂದಿಗಿನ ದೂರವಾಣಿ ಕರೆಯಲ್ಲಿ, ಈ ಹಿಂದೆ ವ್ಯವಹಾರ ಕಾರ್ಯದರ್ಶಿ ಮತ್ತು ವಿದೇಶಾಂಗ ಕಾರ್ಯದರ್ಶಿಯಾಗಿದ್ದಾಗ ಭಾರತ-ಬ್ರಿಟನ್ ದ್ವಿಪಕ್ಷೀಯ ಸಂಬಂಧಕ್ಕೆ ನೀಡಿದ ಕೊಡುಗೆಗಳನ್ನು ಮೋದಿ ಶ್ಲಾಘಿಸಿದ್ದಾರೆ. ಭಾರತ ಮತ್ತು ಬ್ರಿಟನ್ ನಡುವಿನ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಇಬ್ಬರೂ ನಾಯಕರು ಬದ್ಧತೆಯನ್ನು ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com