ಕೋವಿಡ್-19: ದೇಶದಲ್ಲಿ 5,221 ಹೊಸ ಸೋಂಕು ಪ್ರಕರಣ; 5,975 ಸೋಂಕಿತರು ಗುಣಮುಖ

ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 5,221 ಹೊಸ ಸೋಂಕು ಪ್ರಕರಣ ಮತ್ತು 15 ಸಾವು ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 5,221 ಹೊಸ ಸೋಂಕು ಪ್ರಕರಣ ಮತ್ತು 15 ಸಾವು ವರದಿಯಾಗಿದೆ.

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ದೈನಿಕ ವರದಿ ಬಿಡುಗಡೆ ಮಾಡಿದ್ದು. ಇಂದು ಬೆಳಗ್ಗೆ 8 ಗಂಟೆಗೆ ಬಿಡುಗಡೆಯಾದ ವರದಿಯನ್ವಯ ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 5,221ಹೊಸ ಕೊರೋನವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 4,45,00,580ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ದೇಶಾದ್ಯಂತ 15 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 5,28,165 ಲಕ್ಷಕ್ಕೇರಿದೆ.

24 ಗಂಟೆಗಳ ಅವಧಿಯಲ್ಲಿ ಸಕ್ರಿಯ COVID-19 ಪ್ರಕರಣಗಳ ಸಂಖ್ಯೆಯಲ್ಲಿ 905 ಪ್ರಕರಣಗಳ ಇಳಿಕೆಯಾಗಿದ್ದು, ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 47, 945ಕ್ಕೆ ಇಳಿಕೆಯಾಗಿದೆ. ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,39,25,239 ಕ್ಕೆ ಏರಿದೆ.

ರಾಷ್ಟ್ರೀಯ COVID-19 ಚೇತರಿಕೆಯ ಪ್ರಮಾಣವು 98.71 ಪ್ರತಿಶತಕ್ಕೆ ಹೆಚ್ಚಾಗಿದ್ದು, ದೈನಂದಿನ ಧನಾತ್ಮಕತೆಯ ದರವು 2.82 ಶೇಕಡಾದಲ್ಲಿ ದಾಖಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com