5ನೇ ದಿನಕ್ಕೆ ಕಾಲಿಟ್ಟ ಕಾಂಗ್ರೆಸ್ 'ಭಾರತ್ ಜೋಡೊ ಯಾತ್ರೆ', ಕೇರಳದಲ್ಲಿ ರಾಹುಲ್ ಗಾಂಧಿ, ಶಶಿ ತರೂರ್ ಭರ್ಜರಿ ರೋಡ್ ಶೋ!

ಕಾಂಗ್ರೆಸ್ ಪಕ್ಷದ  'ಭಾರತ್ ಜೋಡೊ ಯಾತ್ರೆ' 5ನೇ ದಿನಕ್ಕೆ ಕಾಲಿಟ್ಟಿದ್ದು, ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ 150 ದಿನಗಳ 3,500 ಕಿಮೀ ಯಾತ್ರೆ ಇದೀಗ ಕೇರಳದಲ್ಲಿ ಸಾಗಿದೆ.
ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ
ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ
Updated on

ತಿರುವನಂತಪುರಂ: ಕಾಂಗ್ರೆಸ್ ಪಕ್ಷದ  'ಭಾರತ್ ಜೋಡೊ ಯಾತ್ರೆ' 5ನೇ ದಿನಕ್ಕೆ ಕಾಲಿಟ್ಟಿದ್ದು, ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ 150 ದಿನಗಳ 3,500 ಕಿಮೀ ಯಾತ್ರೆ ಇದೀಗ ಕೇರಳದಲ್ಲಿ ಸಾಗಿದೆ.

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ಈ ಪಾದಯಾತ್ರೆಗೆ ಬೆಂಬಲ ನೀಡಲು ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ಬೀದಿಗಳಲ್ಲಿ ಸಾಲುಗಟ್ಟಿ ನಿಂತಿದ್ದ ಜನರ ಉತ್ತೇಜನ ನೀಡಿ ತಾವೂ ಕೂಡ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದಾರೆ.   ಸೋಮವಾರ ಬೆಳಗ್ಗೆ ಇಲ್ಲಿನ ವೆಲ್ಲಯಾಣಿ ಜಂಕ್ಷನ್‌ನಿಂದ ರಾಹುಲ್ ಗಾಂಧಿ ತಮ್ಮ ಪಾದಯಾತ್ರೆಯನ್ನು ಪ್ರಾರಂಭಿಸಿದರು. ಈ ವೇಳೆ ಸಾಮಾಜಿಕ ಜಾಲತಾಣಗಲ್ಲಿ ಪೋಸ್ಟ್ ಅಪ್ಲೋಡ್ ಮಾಡಿರುವ ಅವರು, 'ಭಾರತ ಮತ್ತು ನಮ್ಮ ಯುವ ಪೀಳಿಗೆಗೆ ಉತ್ತಮ ನಾಳೆಗಾಗಿ ಕಾಯುತ್ತಿದೆ ಎಂಬ ಭರವಸೆ ಮತ್ತು ದೃಢತೆಯನ್ನು ಪ್ರತಿದಿನ ಬೆಳಿಗ್ಗೆ ನನ್ನಲ್ಲಿ ತುಂಬುತ್ತದೆ. ಪ್ರತಿಯೊಬ್ಬರೂ ಭಾರತಕ್ಕಾಗಿ, ಭಾರತಕ್ಕಾಗಿ ಪ್ರತಿ ಹೆಜ್ಜೆ ಹಾಕಬೇಕು ಎಂದು ಬರೆದುಕೊಂಡಿದ್ದಾರೆ.

ಕೇರಳದ ವಯನಾಡಿನ ಸಂಸದರೂ ಆಗಿರುವ ರಾಹುಲ್ ಗಾಂಧಿ ನೇತೃತ್ವದ 'ಪಾದಯಾತ್ರೆ'ಯನ್ನು ವೀಕ್ಷಿಸಲು ಕಾಲ್ನಡಿಗೆಯಲ್ಲಿ ಸೇರಲು ಬರುವವರಲ್ಲದೆ, ರಸ್ತೆಯ ಎರಡೂ ಬದಿಗಳಲ್ಲಿ ನೂರಾರು ಜನರು ಸಾಲುಗಟ್ಟಿ ನಿಂತಿದ್ದರು. ಪಾದಯಾತ್ರೆಯ ಬೆಳಗಿನ ಹಂತವು ಕೇರಳದ ರಾಜಧಾನಿಯ ಹೃದಯಭಾಗಕ್ಕೆ ಸುಮಾರು 11 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಉಸ್ತುವಾರಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಬೆಳಿಗ್ಗೆ 10.30 ರ ಸುಮಾರಿಗೆ, ಪಾದಯಾತ್ರೆಯು ಇಲ್ಲಿನ ಪಟ್ಟೋಮ್‌ನಲ್ಲಿರುವ ಸೇಂಟ್ ಮೇರಿಸ್ ಶಾಲೆಯಲ್ಲಿ ಸ್ಥಗಿತಗೊಂಡಿತು. ಅಲ್ಲಿಂದ ಸಂಜೆ 5 ಗಂಟೆಗೆ ಪಾದಯಾತ್ರೆ ಪುನರಾರಂಭಿಸಲು ನಿರ್ಧರಿಸಲಾಗಿದೆ. ಮಧ್ಯಂತರ ವಿರಾಮದಲ್ಲಿ, ಕಾಂಗ್ರೆಸ್ ಬಿಡುಗಡೆ ಮಾಡಿದ ಯಾತ್ರೆಯ ಪ್ರವಾಸದ ಪ್ರಕಾರ, ರಾಹುಲ್ ಗಾಂಧಿ ಮಧ್ಯಾಹ್ನದ ಊಟಕ್ಕೆ ಗಣ್ಯ ವ್ಯಕ್ತಿಗಳನ್ನು ಭೇಟಿ ಮಾಡಲು ಮತ್ತು ಜವಾಹರ್ ಬಾಲ್ ಮಂಚ್ ಚಿತ್ರಕಲೆ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲು ನಿರ್ಧರಿಸಿದ್ದಾರೆ. ಈ ವೇಳೆ ಅವರೊಂದಿಗೆ ಕಾಂಗ್ರೆಸ್ ಪಕ್ಷದ ಸಂಸದರಾದ ಶಶಿ ತರೂರ್, ಕೆ ಸಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಕೆ ಸುಧಾಕರನ್ ಮತ್ತು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್ ಅವರಂತಹ ಹಿರಿಯ ಕಾಂಗ್ರೆಸ್ ನಾಯಕರು ಸಹ ಇರಲಿದ್ದಾರೆ.

150 ದಿನಗಳ ಯಾತ್ರೆಯನ್ನು ನೆರೆಯ ತಮಿಳುನಾಡಿನ ಕನ್ಯಾಕುಮಾರಿಯಿಂದ ಸೆಪ್ಟೆಂಬರ್ 7 ರಂದು ಪ್ರಾರಂಭಿಸಲಾಯಿತು. ಶನಿವಾರ ಸಂಜೆ ಕೇರಳ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯು ಅಕ್ಟೋಬರ್ 1 ರಂದು ಕರ್ನಾಟಕವನ್ನು ಪ್ರವೇಶಿಸುವ ಮೊದಲು 19 ದಿನಗಳ ಅವಧಿಯಲ್ಲಿ ಏಳು ಜಿಲ್ಲೆಗಳನ್ನು ಮುಟ್ಟುವ 450 ಕಿಲೋಮೀಟರ್‌ಗಳನ್ನು ರಾಜ್ಯದ ಮೂಲಕ ಕ್ರಮಿಸಲಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com