ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ ಎಸಿಬಿ ದಾಳಿ; 12 ಲಕ್ಷ ರೂ., ಪರವಾನಗಿ ಇಲ್ಲದ ಗನ್ ಜಪ್ತಿ

ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಎರಡು ವರ್ಷಗಳ ಹಿಂದಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಶುಕ್ರವಾರ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಮತ್ತು ಅವರಿಗೆ...
ಅಮಾನತುಲ್ಲಾ ಖಾನ್
ಅಮಾನತುಲ್ಲಾ ಖಾನ್

ನವದೆಹಲಿ: ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಎರಡು ವರ್ಷಗಳ ಹಿಂದಿನ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಶುಕ್ರವಾರ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆ ಮತ್ತು ಅವರಿಗೆ ಸಂಬಂಧಿಸಿದ ಇತರ ಐದು ಸ್ಥಳಗಳ ಮೇಲೆ ದಾಳಿ ನಡೆಸಿದೆ.

2020ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಓಖ್ಲಾ ಶಾಸಕ ಅಮಾನತುಲ್ಲಾ ಖಾನ್ ರನ್ನು ವಿಚಾರಣೆಗೆ ಕರೆಯಲಾಗಿತ್ತು. ವಿಚಾರಣೆ ಬೆನ್ನಲ್ಲೇ ಖಾನ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ದಾಳಿ ವೇಳೆ 12 ಲಕ್ಷ ರೂ. ನಗದು ಮತ್ತು ಪರವಾನಗಿ ಇಲ್ಲದ ಗನ್, ಕೆಲವು ಕಾಟ್ರಿಡ್ಜ್‌ಗಳನ್ನು ಜಪ್ತಿ ಮಾಡಲಾಗಿದೆ.

ದೆಹಲಿ ವಕ್ಫ್ ಮಂಡಳಿಯ ಅಧ್ಯಕ್ಷರಾದ ಅಮಾನತುಲ್ಲಾ ಖಾನ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ತಾವು ಹೊಸ ವಕ್ಫ್ ಬೋರ್ಡ್ ಕಚೇರಿಯನ್ನು ನಿರ್ಮಿಸಿದ್ದರಿಂದ ತಮ್ಮನ್ನು ವಿಚಾರಣೆ ಕರೆಯಲಾಗಿದೆ ಹೇಳಿಕೊಂಡಿದ್ದಾರೆ.

ಅಮಾನತುಲ್ಲಾ ಖಾನ್ ಅವರ ಮನೆ ಮತ್ತು ಅವರ ಇತರ ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com