ರಾಹುಲ್‌ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಲಿ, ಆಗದಿರಲಿ, ಅವರಿಗೆ ಪಕ್ಷದಲ್ಲಿ ಯಾವಾಗಲೂ 'ಪ್ರಧಾನ ಸ್ಥಾನ': ಚಿದಂಬರಂ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ವ್ಯಕ್ತಿ ಬಗ್ಗೆ ಒಲವು ವ್ಯಕ್ತಪಡಿಸಿದ ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರಂ ಅವರು, ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿರಲಿ ಅಥವಾ ಆಗದಿರಲಿ ಪಕ್ಷದಲ್ಲಿ ಅವರು ಯಾವಾಗಲೂ "ಪ್ರಮುಖ ಸ್ಥಾನ"
ಪಿ ಚಿದಂಬರಂ
ಪಿ ಚಿದಂಬರಂ
Updated on

ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಮ್ಮತದ ವ್ಯಕ್ತಿ ಬಗ್ಗೆ ಒಲವು ವ್ಯಕ್ತಪಡಿಸಿದ ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರಂ ಅವರು, ರಾಹುಲ್ ಗಾಂಧಿ ಅವರು ಅಧ್ಯಕ್ಷರಾಗಿರಲಿ ಅಥವಾ ಆಗದಿರಲಿ ಪಕ್ಷದಲ್ಲಿ ಅವರು ಯಾವಾಗಲೂ "ಪ್ರಮುಖ ಸ್ಥಾನ" ಹೊಂದಿರುತ್ತಾರೆ ಮತ್ತು ಅವರು ಮಾನ್ಯತೆ ಪಡೆದ ನಾಯಕ ಎಂದು ಭಾನುವಾರ ಪ್ರತಿಪಾದಿಸಿದ್ದಾರೆ. 

ರಾಹುಲ್ ಗಾಂಧಿ ಅವರು ಮತ್ತೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಲು ಇಲ್ಲಿಯವರೆಗೆ ನಿರಾಕರಿಸಿದ್ದಾರೆ. ಆದರೆ ಅವರು ಮನಸ್ಸನ್ನು ಬದಲಾಯಿಸಬಹುದು ಎಂದು ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಚಿದಂಬರಂ ಅವರು ಹೇಳಿದ್ದಾರೆ.

ಎಐಸಿಸಿ ಮುಖ್ಯಸ್ಥರನ್ನು ಆಯ್ಕೆ ಮಾಡಲು ಚುನಾವಣೆಯ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದ್ದು, ಪಕ್ಷದ ಅಧ್ಯಕ್ಷರ ಚುನಾವಣೆಯ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯ ಬಗ್ಗೆ ಯಾವುದೇ ವಿವಾದಕ್ಕೆ ಅವಕಾಶ ಇಲ್ಲ ಎಂದು ಚಿದಂಬರಂ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಯಾವುದೇ ರಾಜಕೀಯ ಪಕ್ಷಗಳು ಮತದಾರರ ಪಟ್ಟಿಯನ್ನು ಪ್ರಕಟಿಸುವುದಿಲ್ಲ ಎಂದು ಒತ್ತಿ ಹೇಳಿದ ಚಿದಂಬರಂ, ಪಿಸಿಸಿ-ವಾರು ಮತದಾರರ ಪಟ್ಟಿಯು ಸಂಬಂಧಿಸಿದ ಪಿಸಿಸಿ ಕಚೇರಿಯಲ್ಲಿ ಪರಿಶೀಲನೆಗೆ ಲಭ್ಯವಿರುತ್ತದೆ ಮತ್ತು ಎಐಸಿಸಿ ಕಚೇರಿಯಲ್ಲಿ ಅಖಿಲ ಭಾರತ ಮತದಾರರ ಪಟ್ಟಿ ಸಹ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com