ಚಂಡೀಗಡ: ಚಂಡೀಗಡ ವಿಶ್ವವಿದ್ಯಾಲಯದ ಹಾಸ್ಟೆಲ್ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಪ್ರತಿಕ್ರಿಯಿಸಿದ್ದಾರೆ.
ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ಯಾವುದೇ ವಿಡಿಯೋಗಳನ್ನು ವಾಟ್ಸಾಪ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡದಂತೆ ಜನರಲ್ಲಿ ವಿನಂತಿಸಿಕೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸೋನು ಸೂದ್, ಚಂಡೀಗಡ ವಿಶ್ವವಿದ್ಯಾಲಯದಲ್ಲಿ ನಡೆದಿರುವುದು ತುಂಬಾ ದುರದೃಷ್ಟಕರ. ನಾವು ನಮ್ಮ ಸಹೋದರಿಯರೊಂದಿಗೆ ನಿಲ್ಲಬೇಕಾದ ಸಮಯವಿದು. ಇದು ಸಮಾಜಕ್ಕೆ ಮಾದರಿಯಾಗಬೇಕಾದ ಸಮಯ, ನಮಗೆ ಪರೀಕ್ಷಾ ಸಮಯವೂ ಹೌದು, ಜವಾಬ್ದಾರಿಯುತವಾಗಿರಿ ಎಂದು ಅವರು ಹೇಳಿದ್ದಾರೆ.
Advertisement