ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ, ಕೇರಳದಲ್ಲಿ 8 ಮಂದಿ ಸೇರಿ 18 ಜನರು ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,858 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,39,046 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,858 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,39,046 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 48,027ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 08 ಜನರು ಸೇರಿ 18 ಜನರು ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ 5,28,337 ಜನರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.11ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 2.76 ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 1.78 ರಷ್ಟಿದೆ. ದೇಶದಲ್ಲಿ ಈವರೆಗೆ 4,39,62,664 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 216.70 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com