ಕೋವಿಡ್-19: ದೇಶಾದ್ಯಂತ 24 ಗಂಟೆಗಳ ಅವಧಿಯಲ್ಲಿ 5,443 ಹೊಸ ಪ್ರಕರಣ ಪತ್ತೆ, 26 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 5,443 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,45,53,042 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 5,443 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4,45,53,042 ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 46,342 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 12 ಸೇರಿದಂತೆ ದೇಶದಾದ್ಯಂತ 26 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 5,28,429 ಜನರು ಮೃತಪಟ್ಟಿರುವುದಾಗಿ ಸಚಿವಾಲಯ ತಿಳಿಸಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.10 ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 1.61 ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ಸದ್ಯ ಈವರೆಗೆ 4,39,78,271 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಸಚಿವಾಲಯದ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 217.11  ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com