ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 4,777 ಹೊಸ ಪ್ರಕರಣ, 23 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 4,777 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,68,114ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 4,777 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,45,68,114ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 43,994ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇಂದರಳದಲ್ಲಿ 11 ಮಂದಿ ಸೇರಿ ದೇಶದಾದ್ಯಂತ 23 ಜನರು ಸೋಂಕಿನಿಂದ ಸಾವಿಗೀಡಾದ್ದಾರೆ. ಈವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 5,28,510 ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.10 ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.72 ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 1.58ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 98.72 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

Related Stories

No stories found.

Advertisement

X
Kannada Prabha
www.kannadaprabha.com