ರಾಜಸ್ತಾನದಲ್ಲಿ ನಾಯಕತ್ವ ಬದಲಾವಣೆ: ಜೈಪುರದಲ್ಲಿರುವ ಸಿಎಂ ಗೆಹ್ಲೊಟ್ ನಿವಾಸದಲ್ಲಿ ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಸಭೆ

ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷೀಯ ಚುನಾವಣಾ ಪ್ರಕ್ರಿಯೆ ಗರಿಗೆದರುತ್ತಿದ್ದಂತೆ ಹಲವು ಬೆಳವಣಿಗೆಗಳಾಗುತ್ತಿವೆ. ಇಂದು ಸಂಜೆ ಜೈಪುರದಲ್ಲಿ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ನಿರ್ಣಯವನ್ನು ಅಲ್ಲಿ ಅಂಗೀಕರಿಸಲಾಗುತ್ತದೆ. 
ಸಿಎಂ ಅಶೋಕ್ ಗೆಹ್ಲೊಟ್ ಮತ್ತು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್
ಸಿಎಂ ಅಶೋಕ್ ಗೆಹ್ಲೊಟ್ ಮತ್ತು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್
Updated on

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷೀಯ ಚುನಾವಣಾ ಪ್ರಕ್ರಿಯೆ ಗರಿಗೆದರುತ್ತಿದ್ದಂತೆ ಹಲವು ಬೆಳವಣಿಗೆಗಳಾಗುತ್ತಿವೆ. ಇಂದು ಸಂಜೆ ಜೈಪುರದಲ್ಲಿ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ರಾಜಸ್ಥಾನದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ನಿರ್ಣಯವನ್ನು ಅಲ್ಲಿ ಅಂಗೀಕರಿಸಲಾಗುತ್ತದೆ. 

ರಾಜಸ್ಥಾನದಲ್ಲಿ ಈ ಮುಖ್ಯ ಬದಲಾವಣೆ ನಿರ್ಧಾರವನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತೆಗೆದುಕೊಳ್ಳುತ್ತಾರೆ ಎಂಬ ನಿರ್ಣಯವನ್ನು ಅಂಗೀಕರಿಸಲಾಗುತ್ತದೆ. ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಸಿಎಂ ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಇಂದು ಸಂಜೆ 7 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ರಾಜಸ್ಥಾನದ ಉಸ್ತುವಾರಿ ಅಜಯ್ ಮಾಕನ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತರಿರುವರು.

ಇದಕ್ಕೂ ಮುನ್ನ ನಿನ್ನೆ ಅಜಯ್ ಮಾಕನ್ ಅವರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದರು. 
ಸೆಪ್ಟೆಂಬರ್ 25 ರಂದು ಸಂಜೆ 7 ಗಂಟೆಗೆ ನಡೆಯಲಿರುವ ರಾಜಸ್ಥಾನ ವಿಧಾನಸಭೆಯ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಭಾಗವಹಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವೀಕ್ಷಕರಾಗಿ ಅಜಯ್ ಮಾಕನ್, ರಾಜಸ್ಥಾನದ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ನೇಮಕ ಮಾಡಲಾಗಿದೆ ಎಂದು ವೇಣುಗೋಪಾಲ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ನಡುವೆ ಪೈಪೋಟಿ ಏರ್ಪಟ್ಟಿದೆ. ನಾಮನಿರ್ದೇಶನಗಳು ಸೆಪ್ಟೆಂಬರ್ 30 ರವರೆಗೆ ಸಲ್ಲಿಕೆಯಾಗಲಿವೆ ಮತ್ತು ಅಕ್ಟೋಬರ್ 19 ರಂದು ಹೊಸ ಕಾಂಗ್ರೆಸ್ ಮುಖ್ಯಸ್ಥರ ಘೋಷಣೆಯಾಗಲಿದೆ. ಸೋನಿಯಾ ಗಾಂಧಿಯವರು ಸೀತಾರಾಮನ್ ಕೇಸ್ರಿ ಅವರನ್ನು 1998ರಲ್ಲಿ ಪಕ್ಷದ ಮುಖ್ಯಸ್ಥರನ್ನಾಗಿ ಮಾಡಿದ ನಂತರ ಕಾಂಗ್ರೆಸ್ ಗಾಂಧಿಯೇತರ ಮುಖ್ಯಸ್ಥರನ್ನು ನೋಡುತ್ತಿರುವುದು 25 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ. 

1997 ರಲ್ಲಿ ಶರದ್ ಪವಾರ್ ಮತ್ತು ರಾಜೇಶ್ ಪೈಲಟ್ ಅವರನ್ನು ಸೀತಾರಾಮ್ ಕೇಸ್ರಿ ಸೋಲಿಸಿದಾಗ ಪಕ್ಷವು ಕೊನೆಯ ಬಾರಿಗೆ ಗಾಂಧಿಯೇತರ ಮುಖ್ಯಸ್ಥರನ್ನು ಹೊಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com