ಮುಕುಲ್ ರೋಹಟಗಿ
ಮುಕುಲ್ ರೋಹಟಗಿ

ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಪ್ರಸ್ತಾಪವನ್ನು ನಯವಾಗಿ ತಿರಸ್ಕರಿಸಿದ ಮುಕುಲ್ ರೋಹಟಗಿ!

ಭಾರತದ ಮುಂದಿನ ಅಟಾರ್ನಿ ಜನರಲ್ ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ತಿರಸ್ಕರಿಸಿದ್ದಾರೆ. ಇದಕ್ಕಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಅವರು ತಮ್ಮ ನಿರ್ಧಾರವನ್ನು ತಿಳಿಸಿದರು.
Published on

ನವದೆಹಲಿ: ಭಾರತದ ಮುಂದಿನ ಅಟಾರ್ನಿ ಜನರಲ್ ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ತಿರಸ್ಕರಿಸಿದ್ದಾರೆ. ಇದಕ್ಕಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಅವರು ತಮ್ಮ ನಿರ್ಧಾರವನ್ನು ತಿಳಿಸಿದರು.

ಮುಕುಲ್ ರೋಹಟಗಿ ಅವರು ತಮ್ಮ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಕಾರಣವಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ರೋಹಟಗಿ ಅವರು ಜೂನ್ 2014ರಿಂದ ಜೂನ್ 2017ರವರೆಗೆ ಅಟಾರ್ನಿ ಜನರಲ್ ಆಗಿದ್ದರು. ನಂತರ ಕೆ.ಕೆ. ವೇಣುಗೋಪಾಲ್ ಅವರನ್ನು 2017ರ ಜುಲೈನಲ್ಲಿ ಹುದ್ದೆಗೆ ನೇಮಿಸಲಾಗಿತ್ತು. 

ವೇಣುಗೋಪಾಲ್ ಅವರನ್ನು ಬದಲಿಸಲು ಕೇಂದ್ರ ಮುಂದಾಗಿದೆ
91 ವರ್ಷದ ಕೆ.ಕೆ ವೇಣುಗೋಪಾಲ್ ಅವರ ಅಧಿಕಾರಾವಧಿ ಸೆಪ್ಟೆಂಬರ್ 30ಕ್ಕೆ ಕೊನೆಗೊಳ್ಳಲಿದೆ. ಹೀಗಾಗಿ ವೇಣುಗೋಪಾಲ್ ಬದಲಿಗೆ ರೋಹಟಗಿ ಅವರಿಗೆ ಅಟಾರ್ನಿ ಜನರಲ್ ಹುದ್ದೆಯನ್ನು ನೀಡಲಾಗಿತ್ತು. ಆದರೆ ಈ ಪ್ರಸ್ತಾಪವನ್ನು ರೋಹಟಗಿ ನಿರಾಕರಿಸಿದ್ದಾರೆ. ಅಟಾರ್ನಿ ಜನರಲ್ ಆಗಿ ವೇಣುಗೋಪಾಲ್ ಅವರ ಅವಧಿ 2020ರಲ್ಲಿ ಕೊನೆಗೊಳ್ಳಲಿದ್ದು, ತಮ್ಮನ್ನು ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೆ ಸರ್ಕಾರ ಅವರ ಅಧಿಕಾರವಧಿಯನ್ನು ಮುಂದುವರೆಸಿತ್ತು.

ಮುಕುಲ್ ರೋಹಟಗಿ ಅನುಭವಿ ವಕೀಲರೆಂದು ಹೆಸರುವಾಸಿಯಾಗಿದ್ದಾರೆ. ಗುಜರಾತ್ ಗಲಭೆ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದರು. ಇದಲ್ಲದೆ, ಅವರು ದೇಶದ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ಅನೇಕ ಉನ್ನತ ಪ್ರಕರಣಗಳಲ್ಲಿ ಕೆಲಸ ಮಾಡಿದ್ದಾರೆ. ಇದಲ್ಲದೇ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗಕ್ಕೆ ಸಂಬಂಧಿಸಿದ ವಿಷಯದಲ್ಲೂ ವಾದ ಮಂಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com