ಹೊಸ ಪಕ್ಷ ಘೋಷಿಸಿದ ಗುಲಾಂ ನಬಿ ಆಜಾದ್, ಅದರ ಹೆಸರೇನು?

ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಇತ್ತೀಚೆಗೆ ಕಾಂಗ್ರೆಸ್ ತೊರೆದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸೋಮವಾರ ಹೊಸ ಪಕ್ಷ ಘೋಷಿಸಿದ್ದಾರೆ. ಅದರ ಹೆಸರು ಡೆಮಾಕ್ರಟಿಕ್ ಆಜಾದ್ ಪಾರ್ಟಿ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುಲಾಂ ನಬಿ ಆಜಾದ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗುಲಾಂ ನಬಿ ಆಜಾದ್

ಜಮ್ಮು: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಇತ್ತೀಚೆಗೆ ಕಾಂಗ್ರೆಸ್ ತೊರೆದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸೋಮವಾರ ಹೊಸ ಪಕ್ಷ ಘೋಷಿಸಿದ್ದಾರೆ. ಅದರ ಹೆಸರು ಡೆಮಾಕ್ರಟಿಕ್ ಆಜಾದ್ ಪಾರ್ಟಿ.

ಕಾಂಗ್ರೆಸ್ ಪಕ್ಷದಿಂದ ತೊರೆದ ಸರಿಯಾದ ಒಂದು ತಿಂಗಳಲ್ಲಿ ಹೊಸ ಪಕ್ಷವನ್ನು ಗುಲಾಂ ನಬಿ ಆಜಾದ್ ಘೋಷಿಸಿದ್ದಾರೆ. ಇಂದು ಶ್ರೀನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೊಸ ಪಕ್ಷ ಘೋಷಿಸಿದ ಅವರು, ತಮ್ಮ ನೂತನ ಪಕ್ಷ ಜಾತ್ಯತೀತ. ಪ್ರಜಾಸತ್ತಾತ್ಮಕ ಮತ್ತು ಸ್ವತಂತ್ರವಾಗಿರಲಿದ್ದು ಯಾವುದೇ ಪ್ರಭಾವ, ಆಮಿಷಗಳಿಗೆ ಒಳಗಾಗುವುದಿಲ್ಲ ಎಂದಿದ್ದಾರೆ.

ಪಕ್ಷದ ನೂತನ ಧ್ವಜವನ್ನು ಕೂಡ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಅದು ಸಾಸಿವೆ, ಬಿಳಿ ಮತ್ತು ನೀಲಿ ಬಣ್ಣಗಳನ್ನು ಹೊಂದಿದೆ. ಸದ್ಯದಲ್ಲಿಯೇ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯಲಿದೆ.   

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com