ಭಯೋತ್ಪಾದಕರು
ದೇಶ
ಭಾರತೀಯ ಸೇನೆಯ ಎನ್‌ಕೌಂಟರ್‌ನಲ್ಲಿ ಜೈಶ್ ಸಂಘಟನೆಯ ಉಗ್ರ ಬಲಿ!
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಬಟ್ಪೋರಾ ಗ್ರಾಮದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಾಗರಿಕರು ಹಾಗೂ ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬಟ್ಪೋರಾದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಯೋತ್ಪಾದಕರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದಾಗ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ಗೆ ತಿರುಗಿತು ಎಂದು ಅವರು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ