
ನವದೆಹಲಿ: ಇಂದು ಮಾಜಿ ಪ್ರಧಾನ ಮಂತ್ರಿ ಡಾ.ಮನ್ ಮೋಹನ್ ಸಿಂಗ್ ಅವರಿಗೆ 90ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
ಡಾ.ಮನ್ ಮೋಹನ್ ಸಿಂಗ್ ಅವರು ಧೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ದೇಶದ ಅತ್ಯುತ್ತಮ ಸ್ಟೇಟ್ಸ್ ಮನ್ ಡಾ. ಮನ್ ಮೋಹನ್ ಸಿಂಗ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು, ಅವರ ಮಾನವೀಯತೆ, ಬದ್ಧತೆ ಮತ್ತು ದೇಶದ ಅಭಿವೃದ್ಧಿಯಲ್ಲಿ ಕೊಡುಗೆ ಅನನ್ಯವಾಗಿದೆ. ಅವರು ನನಗೆ ಮತ್ತು ದೇಶಾದ್ಯಂತ ಕೋಟ್ಯಂತರ ಜನರಿಗೆ ಪ್ರೇರಣೆಯಾಗಿದ್ದಾರೆ. ಅವರ ಉತ್ತಮ ಆರೋಗ್ಯ ಮತ್ತು ಸಂತೋಷಕ್ಕಾಗಿ ಪ್ರಾರ್ಥಿಸುವುದಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
1932, ಸೆಪ್ಟೆಂಬರ್ 26 ರಂದು ಪಂಜಾಬಿನ ಹಳ್ಳಿಯೊಂದರಲ್ಲಿ ಜನಿಸಿದ ಡಾ. ಮನ್ ಮೋಹನ್ ಸಿಂಗ್, ಪಂಜಾಬ್ ವಿವಿ, ಕೆಂಬ್ರಿಡ್ಬ್ ಮತ್ತು ಆಕ್ಸ್ ಫರ್ಡ್ ವಿಶ್ವವಿದ್ಯಾಲಗಳಲ್ಲಿ ಅಧ್ಯಯನ ಮಾಡಿದ್ದಾರೆ. 2004 ರಿಂದ 2014ರವರೆಗೂ ಎರಡು ಅವಧಿಗೆ ದೇಶದ ಪ್ರಧಾನಿಯಾಗಿ ಡಾ. ಮನ್ ಮೋಹನ್ ಸಿಂಗ್ ಕಾರ್ಯನಿರ್ವಹಿಸಿದ್ದಾರೆ.
Advertisement