ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 3,230 ಹೊಸ ಪ್ರಕರಣ ಪತ್ತೆ, 4,255 ಸೋಂಕಿತರ ಚೇತರಿಕೆ!

ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, 24 ಗಂಟೆಗಳಲ್ಲಿ ದೇಶಾದ್ಯಂತ 3,230 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, 24 ಗಂಟೆಗಳಲ್ಲಿ ದೇಶಾದ್ಯಂತ 3,230 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,230 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ದೇಶದ ಒಟ್ಟು ಸೋಂಕಿತರ ಸಂಖ್ಯೆ 44,575,473ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ದೇಶಾದ್ಯಂತ 32 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ದೇಶದಲ್ಲಿ ಕೋವಿಡ್ ನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 5,28,562ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 4,255 ಸೋಂಕಿತರು ಚೇತರಿಸಿಕೊಂಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 4,40,04,553ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 42,358 ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.72ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ1.18ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ 1.58ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಕೋವಿಡ್-19 ಲಸಿಕಾ ಅಭಿಯಾನದ ಅಡಿಯಲ್ಲಿ 217.82 ಕೋಟಿ ಕೋವಿಡ್ ವಿರುದ್ದದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com