ಸೆ.23 ರ ಹರ್ತಾಳ್: ಪಿಎಫ್ಐ ನಿಂದ 5 ಕೋಟಿ ರೂ. ನಷ್ಟ ಪರಿಹಾರ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಕೆಎಸ್ ಆರ್ ಟಿಸಿ! 

ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) ಸೆ.23 ರಂದು ಪಿಎಫ್ಐ ನಡೆಸಿದ ಹರ್ತಾಳ್ ನಿಂದಾಗಿ 5 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಿ ಕೇರಳ ಹೈಕೋರ್ಟ್ ಮೊರೆ ಹೋಗಿದೆ.
ಕೇರಳ ಹೈಕೋರ್ಟ್
ಕೇರಳ ಹೈಕೋರ್ಟ್

ಕೇರಳ: ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) ಸೆ.23 ರಂದು ಪಿಎಫ್ಐ ನಡೆಸಿದ ಹರ್ತಾಳ್ ನಿಂದಾಗಿ 5 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಿ ಕೇರಳ ಹೈಕೋರ್ಟ್ ಮೊರೆ ಹೋಗಿದೆ.

5 ಕೋಟಿ ರೂಪಾಯಿ ನಷ್ಟ ಪರಿಹಾರ ನೀಡಬೇಕು ಎಂದು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಕೇಳಿದೆ. 

ಸೆ.22 ರಂದು ಪಿಎಫ್ಐ ಮೇಲೆ ಎನ್ಐಎ ದಾಳಿ ನಡೆದಿದ್ದನ್ನು ಖಂಡಿಸಿ ಸೆ.23 ರಂದು ಸಂಘಟಾನೆ ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆ ನೀಡಿತ್ತು. ಪ್ರತಿಭಟನೆ ಸಂದರ್ಭದಲ್ಲಿ ವ್ಯಾಪಕ ಹಿಂಸಾಚಾರ ಉಂಟಾಗಿ ಬಸ್ ಗಳಿಗೆ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾಗಿತ್ತು. 

ಕೇರಳ ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕೆಎಸ್ ಆರ್ ಟಿಸಿ ಪರ ವಕೀಲ ದೀಪು ಥನ್ಕನ್ ಮುಂಚಿತವಾಗಿ ಸೂಚನೆ ನೀಡದೆಯೇ ಹರ್ತಾಳ್ ಗೆ ಕರೆ ನೀಡಲಾಗಿತ್ತು. ಇದು ಹೈಕೋರ್ಟ್ ಆದೇಶದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com