ಇದೇ ಮೊದಲ ಬಾರಿಗೆ ಸಾಂವಿಧಾನಿಕ ಪೀಠದ ವಿಚಾರಣೆಗಳ ನೇರ ಪ್ರಸಾರ ಪ್ರಾರಂಭಿಸಿದ ಸುಪ್ರೀಂ ಕೋರ್ಟ್

ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ತನ್ನ ಸಾಂವಿಧಾನಿಕ ಪೀಠದ ವಿಚಾರಣೆಯನ್ನು ನೇರ ಪ್ರಸಾರ ಮಾಡಲು ಪ್ರಾರಂಭಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Updated on

ನವದೆಹಲಿ: ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ತನ್ನ ಸಾಂವಿಧಾನಿಕ ಪೀಠದ ವಿಚಾರಣೆಯನ್ನು ನೇರ ಪ್ರಸಾರ ಮಾಡಲು ಪ್ರಾರಂಭಿಸಿದೆ.

2018ರ ಸೆಪ್ಟೆಂಬರ್ 27 ರಂದು ಆಗಿನ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಕ್ ಮಿಶ್ರಾ ಅವರು ನ್ಯಾಯಾಲಯದ ಸಾಂವಿಧಾನಿಕ ಮತ್ತು ಪ್ರಾಮುಖ್ಯತೆಯ ಪ್ರಕರಣಗಳ ವಿಚಾರಣೆಗಳ ಕಲಾಪದ ನೇರ ಪ್ರಸಾರಕ್ಕೆ ಅನುಮತಿ ನೀಡುವ ಕುರಿತು ಮಹತ್ವದ ತೀರ್ಪು ನೀಡಿದ್ದರು. ಇದೇ ವೇಳೆ ಸೂರ್ಯನ ಬೆಳಕು ಅತ್ಯುತ್ತಮ ಸೋಂಕುನಿವಾರಕವಾಗಿದೆ ಎಂದು ಹೇಳಿದ್ದರು.

ಈ ಕಲಾಪಗಳನ್ನು webcast.gov.in/scindia/ ನಲ್ಲಿ ನೋಡಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ, ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ನೇತೃತ್ವದ ಪೀಠವು, ಯೂಟ್ಯೂಬ್ ಅನ್ನು ಬಳಸುವ ಬದಲು ತನ್ನ ವಿಚಾರಣೆಗಳ ಕಲಾಪಗಳನ್ನು ಲೈವ್-ಸ್ಟ್ರೀಮ್ ಮಾಡಲು ಉನ್ನತ ನ್ಯಾಯಾಲಯವು ಶೀಘ್ರದಲ್ಲೇ ತನ್ನದೇ ಆದ ವೇದಿಕೆಯನ್ನು ಹೊಂದಲಿದೆ ಎಂದು ಹೇಳಿತ್ತು.

ಸಿಜೆಐ ನೇತೃತ್ವದ ಇತ್ತೀಚಿನ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ತೆಗೆದುಕೊಂಡ ಸರ್ವಾನುಮತದ ನಿರ್ಧಾರದಲ್ಲಿ, ನ್ಯಾಯಮೂರ್ತಿ ಮಿಶ್ರಾ ಅವರ ಹಾದಿಯನ್ನು ಮುರಿಯುವ ಘೋಷಣೆಯ ನಾಲ್ಕು ವರ್ಷಗಳ ನಂತರ ಸೆಪ್ಟೆಂಬರ್ 27 ರಿಂದ ಎಲ್ಲಾ ಸಾಂವಿಧಾನಿಕ ಪೀಠದ ವಿಚಾರಣೆಗಳನ್ನು ಲೈವ್-ಸ್ಟ್ರೀಮ್ ಮಾಡಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.

ಸುಪ್ರೀಂ ಕೋರ್ಟ್ ಮೊದಲಿಗೆ ಯೂಟ್ಯೂಬ್ ಮೂಲಕ ಕಲಾಪಗಳನ್ನು ಲೈವ್-ಸ್ಟ್ರೀಮ್ ಮಾಡಬಹುದು ಮತ್ತು ನಂತರ ಅವುಗಳನ್ನು ತನ್ನ ಸರ್ವರ್‌ನಲ್ಲಿ ಹೋಸ್ಟ್ ಮಾಡಬಹುದು ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಜನರು ತಮ್ಮ ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಕಂಪ್ಯೂಟರ್‌ಗಳಲ್ಲಿ ಯಾವುದೇ ತೊಂದರೆಯಿಲ್ಲದೆ ವಿಚಾರಣೆಗಳನ್ನು ವೀಕ್ಷಿಸಬಹುದು.

ಆಗಸ್ಟ್ 26 ರಂದು, ಐತಿಹಾಸಿಕವಾಗಿ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ವೆಬ್‌ಕಾಸ್ಟ್ ಪೋರ್ಟಲ್ ಮೂಲಕ ಆಗಿನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ ನಡೆಸಿದ ವಿಚಾರಣೆಯನ್ನು ಲೈವ್-ಸ್ಟ್ರೀಮ್ ಮಾಡಿತ್ತು. ನ್ಯಾಯಮೂರ್ತಿ ರಮಣ ಅವರ ಅಧಿಕಾರವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಔಪಚಾರಿಕ ಪ್ರಕ್ರಿಯೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com