ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇನೆಯ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಗುರಿಯಾಗಿಸಿ ದಾಳಿಗೆ ಮುಂದಾಗಿದ್ದ ಇಬ್ಬರು ಸ್ಥಳೀಯ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಕಾಶ್ಮೀರ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಾರಾಮುಲ್ಲಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಯೀಸ್ ಭಟ್ ಅವರು ಶುಕ್ರವಾರ ಮುಂಜಾನೆ ಪಟ್ಟಾನ್‌ನ ಯಡಿಪೋರಾ ಪ್ರದೇಶದಲ್ಲಿ ಉಗ್ರರ ಉಪಸ್ಥಿತಿ ಬಗ್ಗೆ ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು.
ಸೇನೆಯ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಈ ವೇಳೆ ಸೇನೆಯಿಂದ ಕಾರ್ಯಾಚರಣೆ ಶುರುವಾಯಿ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಸೇನೆಯ ಅಗ್ನಿವೀರ್(ನೇಮಕಾತಿ) ರ್ಯಾಲಿಯನ್ನು ಗುರಿಯಾಗಿಸಲು ಭಯೋತ್ಪಾದಕರು ಇಲ್ಲಿಗೆ ಬಂಧಿದ್ದರು. ಸೇನೆಗೆ ಸೇರಲು ಪ್ರಯತ್ನಿಸುತ್ತಿರುವ ಯುವಕರನ್ನು ತೊಂದರೆಕ್ಕೀಡು ಮಾಡುವುದು. ಈ ರ್ಯಾಲಿಯನ್ನು ವಿಫಲಗೊಳಿಸಲು ಅವರು ಯೋಜಿಸಿದ್ದರು. ಅದನ್ನು ನಾವು ವಿಫಲಗೊಳಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದರು.
ಭದ್ರತಾ ಪಡೆಗಳು ಎನ್‌ಕೌಂಟರ್ ಸ್ಥಳದಿಂದ ಎಕೆಎಸ್ -74 ಯು ರೈಫಲ್ ಮತ್ತು ಮೂರು ಮ್ಯಾಗಜೀನ್‌ಗಳು, ಪಿಸ್ತೂಲ್ ಮ್ಯಾಗಜೀನ್ ಮತ್ತು ಎರಡು ಬುಲೆಟ್‌ಗಳನ್ನು ವಶಪಡಿಸಿಕೊಂಡಿವೆ ಎಂದು ಅವರು ಹೇಳಿದರು.
Advertisement