ಚಂಡೀಗಢವನ್ನು ಪಂಜಾಬ್ಗೆ ವರ್ಗಾಯಿಸಿ: ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಭಗವಂತ್ ಮಾನ್
ಚಂಡೀಗಢವನ್ನು ಪಂಜಾಬ್ ರಾಜ್ಯಕ್ಕೆ ವರ್ಗಾಯಿಸುವಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶುಕ್ರವಾರ ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದರು.
Published: 01st April 2022 01:48 PM | Last Updated: 01st April 2022 01:48 PM | A+A A-

ಭಗವಂತ್ ಮಾನ್
ಚಂಡೀಗಢ: ಚಂಡೀಗಢವನ್ನು ಪಂಜಾಬ್ ರಾಜ್ಯಕ್ಕೆ ವರ್ಗಾಯಿಸುವಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶುಕ್ರವಾರ ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದರು.
ಪಂಜಾಬ್ ಮತ್ತು ಹರಿಯಾಣದ ರಾಜಧಾನಿಯಾಗಿ ಚಂಡೀಗಢ ಕಾರ್ಯನಿರ್ವಹಿಸುತ್ತಿದ್ದು, ಇದೊಂದು ಕೇಂದ್ರಾಡಳಿತ ಪ್ರದೇಶವಾಗಿದೆ.
ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದಲ್ಲಿ ಇನ್ಮುಂದೆ ಪಂಜಾಬ್ ಕಾನೂನುಗಳ ಬದಲಿಗೆ ಕೇಂದ್ರೀಯ ಸೇವಾ ಕಾಯ್ದೆ (ಕೇಂದ್ರಾಡಳಿತ ಪ್ರದೇಶಗಳಿಗೆ ಮೀಸಲಿರುವ ಕಾನೂನು)ಯ ನಿಯಮ ಅನುಷ್ಠಾನಗೊಳಿಸಲಾಗುತ್ತದೆ ಎಂದು ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದರು.
ಇದಕ್ಕೆ ಭಗವಂತ್ ಮಾನ್ ಸೇರಿದಂತೆ ಅನೇಕ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ. ಪಂಜಾಬ್ ಕೇಂದ್ರದ ನಿರ್ಧಾರದ ವಿರುದ್ಧ ತೀವ್ರ ಹೋರಾಟ ನಡೆಸಲಿದೆ. ಚಂಡೀಗಢದ ಮೇಲೆ ಪಂಜಾಬ್ಗೆ ಇರುವ ಹಕ್ಕುಗಳನ್ನು ಕಸಿದುಕೊಳ್ಳಲು ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಈ ಕ್ರಮಕ್ಕೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ.