ಕೇಜ್ರಿವಾಲ್ ಮನೆ ಧ್ವಂಸ ಪ್ರಕರಣ: ಎಫ್ಐಆರ್ ದಾಖಲಿಸಿದ ಪೊಲೀಸರು
ದಿ ಕಾಶ್ಮೀರ್ ಫೈಲ್ಸ್ ಕುರಿತು ಅರವಿಂದ್ ಕೇಜ್ರಿವಾಲ್ ನೀಡಿದ್ದ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕೇಜ್ರಿವಾಲ್ ಮನೆ ಧ್ವಂಸ ಮಾಡಿದ ಪ್ರಕರಣದ ಬಗ್ಗೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
Published: 01st April 2022 01:29 PM | Last Updated: 01st April 2022 02:41 PM | A+A A-

ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಬಿಜೆಪಿ ಯುವ ಮೋರ್ಚಾದಿಂದ ನಡೆದ ಪ್ರತಿಭಟನೆ
ನವದೆಹಲಿ: ದಿ ಕಾಶ್ಮೀರ್ ಫೈಲ್ಸ್ ಕುರಿತು ಅರವಿಂದ್ ಕೇಜ್ರಿವಾಲ್ ನೀಡಿದ್ದ ಹೇಳಿಕೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕೇಜ್ರಿವಾಲ್ ಮನೆ ಧ್ವಂಸ ಮಾಡಿದ ಪ್ರಕರಣದ ಬಗ್ಗೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ದೆಹಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್ ದೆಹಲಿ ಪೊಲೀಸರು ಹಾಗೂ ಕೇಂದ್ರ ಸರ್ಕಾರದ ಪರವಾಗಿ ಕೋರ್ಟ್ ಎದುರು ಹಾಜರಾಗಿ ಹೇಳಿಕೆ ನೀಡಿದ್ದು ಮುಖ್ಯಮಂತ್ರಿಗಳ ನಿವಾಸದ ಸುತ್ತಮುತ್ತಲ ಪ್ರದೇಶಗಳಲ್ಲಿನ ಸಿಸಿಟಿವಿ ಫುಟೇಜ್ ಕ್ಯಾಮರಾ ಗಳೂ ಸೇರಿದಂತೆ ಎಲ್ಲಾ ಸಾಕ್ಷ್ಯಗಳನ್ನೂ ಸಂರಕ್ಷಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನೆ ಧ್ವಂಸ ಪ್ರಕರಣ: 8 ಮಂದಿ ಬಂಧನ
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಮಂದಿಯನ್ನು ಬಂಧಿಸಲಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ, ನ್ಯಾ. ನವೀನ್ ಚಾವ್ಲಾ ಆಮ್ ಆದ್ಮಿ ಪಕ್ಷದ ಶಾಸಕ ಸೌರಭ್ ಭಾರದ್ವಾಜ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸುತ್ತಿದ್ದರು. ತನಿಖೆ ಪ್ರಗತಿಗೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಕೋರ್ಟ್ ದೆಹಲಿ ಪೊಲೀಸರಿಗೆ ಸಮಯಾವಕಾಶ ನೀಡಿದೆ.